ಲಖನೌ: ಉತ್ತರ ಪ್ರದೇಶದ ಮೀರತ್‌ನಲ್ಲಿ ಪ್ರಾಬಲ್ಯವಿರುವ ಗ್ರಾಮದಲ್ಲಿ ವಾಸವಿರುವ 150ಕ್ಕೂ ಅಧಿಕ ಕುಟುಂಬಗಳಿಗೆ ಮನೆ ತೊರೆಯುವಂತೆ ಕಿರುಕುಳ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಹಲವು ವರ್ಷಗಳಿಂದ ನಾವು ಇಲ್ಲೇ ವಾಸವಾಗಿದ್ದೇವೆ. ಆದರೆ, ಈಗ ಮನೆ ತೊರೆಯುವಂತೆ ದುಷ್ಕರ್ಮಿಗಳು ಬೆದರಿಕೆ ಹಾಕುತ್ತಿದ್ದಾರೆ ಎಂದು ಹಿಂದೂ ಕುಟುಂಬಸ್ಥರು ಅಳಲು ತೊಡಿಕೊಂಡಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಈ ಸಂಬಂಧ ಸೂಕ್ತ ತನಿಖೆ ನಡೆಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಆಗ್ರಹಿಸಿದ್ದಾರೆ. ಹಿಂದೂ ಕುಟುಂಬಗಳ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ನಾಯಕರೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ.
from India & World News in Kannada | VK Polls https://ift.tt/2FBK5ni