ಜೈ ಶ್ರೀರಾಮ್‌ ಹೇಳುವಂತೆ ಒತ್ತಾಯ, ಕಳ್ಳತನ ಆರೋಪದ ಮೇಲೆ ಹಲ್ಲೆಗೊಳಗಾಗಿದ್ದ ಯುವಕ ಸಾವು

ಜಮ್ಷೆಡ್‌ಪುರ: ಕಳ್ಳತನದ ಆರೋಪದ ಮೇಲೆ ಗುಂಪು ಹಲ್ಲೆಗೆ ಒಳಗಾಗಿದ್ದ ಜಾರ್ಖಂಡ್‌ ಯುವಕ ಮೃತಪಟ್ಟಿದ್ದಾನೆ. ಕಳ್ಳತನ ಮಾಡುತ್ತಿದ್ದಾನೆ ಎಂಬ ಶಂಕೆ ಮೇರೆಗೆ ತಬ್ರೇಜ್‌ ಅನ್ಸಾರಿ ಅಲಿಯಾಸ್‌ ಸೋನು ಎಂಬ ಯುವಕನನ್ನು ಸ್ಥಳೀಯರ ಗುಂಪು ಕಟ್ಟಿ ಹಾಕಿ 18 ಗಂಟೆಗಳ ಕಾಲ ನಿರಂತರವಾಗಿ ಹಲ್ಲೆ ನಡೆಸಿತ್ತು. ಅಲ್ಲದೇ , ಎಂದು ಘೋಷನೆ ಕೂಗುವಂತೆಯೂ ಒತ್ತಾಯಿಸಿತ್ತು. ಸುಮಾರು ಗಂಟೆಗಳ ಹಲ್ಲೆ ನಡೆಸಿದ ನಂತರ ಯುವಕನನ್ನು ಪೊಲೀಸ್‌ ಠಾಣೆಗೆ ಒಪ್ಪಿಸಲಾಯಿತು. ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಯುವಕ ತಬ್ರೇಜ್‌ ಮೃತಪಟ್ಟಿದ್ದಾನೆ. ಕಳ್ಳತನದ ಆರೋಪದ ಮೇಲೆ ಈತನ ಮೇಲೆ ಹಲ್ಲೆ ನಡೆಸಿಲ್ಲ. ಆತನ ಹೆಸರು ನೋಡಿ ಥಳಿಸಲಾಗಿದೆ. ಇದು ಕೋಮು ದಾಳಿಯಾಗಿದೆ. ಆಸ್ಪತ್ರೆಯಲ್ಲಿ ಆತನನ್ನು ನೋಡಲು ಕೂಡ ನಮಗೆ ಅವಕಾಶ ನೀಡಲಿಲ್ಲ ಎಂದು ಮೃತನ ಸಂಬಂಧಿಕರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ಅವರ ವಿರುದ್ಧವೂ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ. ಪ್ರಕರಣ ಸಂಬಂಧ ಎಫ್‌ಐಆರ್‌ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.


from India & World News in Kannada | VK Polls http://bit.ly/2X3eO7A

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...