ವಿರಾಟ್‌ಗಿಲ್ಲ ವಿರಾಮದ ದಿನಗಳು!

ಹೊಸದಿಲ್ಲಿ: ಐಸಿಸಿ 2019 ಏಕದಿನ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಸೋಲಿಲ್ಲದ ಸರದಾರನಾಗಿ ಮುನ್ನಡೆಯುತ್ತಿದೆ. ಇದಕ್ಕೆಲ್ಲ ಕಾರಣ ತೆರೆಮರೆಯ ಹಿಂದಿನ ಸತತ ಪರಿಶ್ರಮವಾಗಿದೆ. ಇದೆಕ್ಕೊಂದು ಉದಾಹರಣೆಯೆಂಬಂತೆ ವಿರಾಮದ ದಿನಗಳಲ್ಲೂ ಟೀಮ್ ಇಂಡಿಯಾ ನಾಯಕ ಕಠಿಣ ಅಭ್ಯಾಸದಲ್ಲಿ ನಿರತವಾಗಿದ್ದಾರೆ. ಯಶಸ್ಸಿಗೆ ಯಾವುದೇ ಅಡ್ಡದಾರಿಗಳಿಲ್ಲ ಎಂಬಂತೆ ವಿರಾಟ್ ಕೊಹ್ಲಿ ತಮ್ಮ ಫಿಟ್ನೆಸ್ ಮಟ್ಟವನ್ನು ಕಾಯ್ದುಕೊಳ್ಳಲು ಯಾವುದೇ ರಾಜಿಗೂ ತಯಾರಿಲ್ಲ. ಸ್ವತ: ವಿರಾಟ್ ಕೊಹ್ಲಿ ಅವರೇ ಹಂಚಿಕೊಂಡಿರುವ ವೀಡಿಯೋದಲ್ಲಿ ಜಿಮ್‌ನಲ್ಲಿ ಕಠಿಣ ವರ್ಕೌಟ್‌ನಲ್ಲಿ ನಿರತವಾಗಿದ್ದಾರೆ. ಈ ಮೂಲಕ ತಮ್ಮ ಸಹ ಆಟಗಾರರಿಗೆ ಮಾದರಿಯಾಗಿದ್ದಾರೆ. ವಿರಾಮದ ದಿನಗಳಿಲ್ಲ. ಕಠಿಣ ಪರಿಶ್ರಮದ ಹೊರತಾಗಿಯೂ ಏನನ್ನು ಸಾಧಿಸಲು ಸಾಧ್ಯವಿಲ್ಲ ಎಂದು ಸಹ ಕೊಹ್ಲಿ ಉಲ್ಲೇಖಿಸಿದ್ದಾರೆ. ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡವು ಗುರುವಾರ ನಡೆಯುವ ಪಂದ್ಯದಲ್ಲಿ ವೆಸ್ಟ್‌ಇಂಡೀಸ್ ಸವಾಲನ್ನು ಎದುರಿಸಲಿದೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka http://bit.ly/2J8NKK4

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...