
ಹೊಸದಿಲ್ಲಿ: 17ನೇ ಲೋಕಸಭೆ ಮೊಟ್ಟ ಮೊದಲ ಅಧಿವೇಶನದಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಿದರು. ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಗಳಿಸಿದ ನಂತರ ಎರಡನೇ ಬಾರಿಗೆ ಅಧಿಕಾರ ರಚಿಸಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದ ಪರವಾಗಿ ಮೋದಿ ಉತ್ತರಿಸಿದರು. ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸುವಲ್ಲಿ ನಾವು ಮುಂದಾಗಿದ್ದೇವೆ. ಭಾರತವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು. ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಬೆಂಬಲ ನೀಡಿರುವ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ. ಜತೆಗೆ ಸದನದಲ್ಲಿರುವ ಎಲ್ಲ ಸಂಸದರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮೋದಿ ಹೇಳಿದರು.
from India & World News in Kannada | VK Polls http://bit.ly/31LDBLU