ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್‌ಲಾಲ್ ಸೈನಿ ನಿಧನ

ಜೈಪುರ: ಬಿಜೆಪಿ ಅಧ್ಯಕ್ಷ ಮದನ್ ಲಾಲ್ ಸೈನಿ ಸೋಮವಾರ ದಿಲ್ಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ರಾಜ್ಯಸಭೆ ಸದಸ್ಯರಾಗಿದ್ದ ಅವರು, ಅನಾರೋಗ್ಯದಿಂದ ಬಳಲಿ ದಿಲ್ಲಿಯ ಅಖಿಲ ಭಾರತ ವೈದ್ಯ ವಿಜ್ಞಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶ್ವಾಸಕೋಶದ ಸೋಂಕಿಗೆ ತುತ್ತಾಗಿದ್ದ ಅವರು ಮೊದಲು ಜೈಪುರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಬಳಿಕ ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ದಿಲ್ಲಿಯ ಏಮ್ಸ್‌ಗೆ ವರ್ಗಾವಣೆ ಮಾಡಲಾಗಿತ್ತು. ಕಳೆದ ವರ್ಷವಷ್ಟೇ ಸೈನಿ ಅವರನ್ನು ರಾಜಸ್ಥಾನ ಅಧ್ಯಕ್ಷರಾಗಿ ನೇಮಿಸಲಾಗಿತ್ತು. ಅವರು ಮಾಜಿ ಶಾಸಕರಾಗಿದ್ದು ಆರೆಸ್ಸೆಸ್ ಕಾರ್ಯಕರ್ತರಾಗಿದ್ದರು. ಬಿಜೆಪಿಯ ಕಿಸಾನ್ ಮೋರ್ಚಾದಲ್ಲಿ ನಾನಾ ಹುದ್ದೆಗಳನ್ನು ನಿರ್ವಹಿಸಿದ್ದರು. ಮದನ್ ಲಾಲ್ ಸೈನಿ ಅವರ ನಿಧನಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. 'ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್‌ ಲಾಲ್‌ ಸೈನಿ ಜಿ ಅವರ ಹಠಾತ್ ನಿಧನದ ಸುದ್ದಿ ತಿಳಿದು ಆಘಾತವಾಯಿತು. ಅವರ ಕುಟುಂಬ ಸದಸ್ಯರಿಗೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ; ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ' ಎಂದು ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.


from India & World News in Kannada | VK Polls http://bit.ly/2ZLJ5oi

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...