ಐಎಂಎ ಜ್ಯುವೆಲ್ಸ್‌ ವಂಚನೆ: ಸಂಸತ್ತಿನಲ್ಲಿ ಕನ್ನಡದಲ್ಲಿ ಪ್ರಸ್ತಾಪಿಸಿದ ತೇಜಸ್ವಿ ಸೂರ್ಯ

ಹೊಸದಿಲ್ಲಿ: ಬಹುಕೋಟಿ ವಂಚನೆ ಪ್ರಕರಣದಿಂದ ಸಾವಿರಾರು ಅಮಾಯಕರು ಹಣ ಕಳೆದುಕೊಂಡಿದ್ದಾರೆ. ಈ ಪ್ರಕರಣ ಈಗ ಲೋಕಸಭೆಯಲ್ಲೂ ಪ್ರತಿಧ್ವನಿಸಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಲೋಕಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಐಎಂಎ ಜ್ಯುವೆಲ್ಸ್‌ನಲ್ಲಿ ಹಣ ಹೂಡಿಕೆ ಮಾಡಿ ಸಾವಿರಾರು ಮಂದಿ ವಂಚನೆಗೊಳಗಾಗಿದ್ದಾರೆ. ಹಗರಣದ ಪ್ರಮುಖ ಆರೋಪಿಯ ವಿರುದ್ಧ 10 ಸಾವಿರಕ್ಕೂ ಹೆಚ್ಚು ಎಫ್‌ಐಆರ್‌ ದಾಖಲಾಗಿದೆ. ಆದರೂ ಕರ್ನಾಟಕ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು. ಕರ್ನಾಟಕದಲ್ಲಿ ಹೊಸ ಕನ್ನಡದ ಹೊಸ ಸರಕಾರ ಉದಯವಾಗಬೇಕಾಗಿದೆ. ಹೊಸ ಕರ್ನಾಟಕದ ಉದಯ ಆಗಬೇಕಾಗಿದೆ. ಈ ಜವಾಬ್ದಾರಿ ನಮ್ಮ ಯುವಕರ ಮೇಲಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.


from India & World News in Kannada | VK Polls http://bit.ly/2J8MwOY

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...