ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಹತ್ಯೆ

ಹೊಸದಿಲ್ಲಿ: ಕಳೆದ 10 ದಿನಗಳ ಹಿಂದೆ ಉತ್ತರ ದಿಲ್ಲಿಯ ನರೇಲಾ ನಿವಾಸದಿಂದ ನಾಪತ್ತೆಯಾಗಿದ್ದ 7 ವರ್ಷದ ಬಾಲಕಿ ಮೇಲೆ ಎಸಗಿ ಹತ್ಯೆ ಮಾಡಲಾಗಿದೆ. ಘಟನೆ ಸಂಬಂಧ ಬಾಲಕಿ ನೆರೆಮನೆಯ ಮಹ್ಮದ್ ಇಮ್ರಾನ್ ಎಂಬ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಈತ 2011ರಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಜೈಲು ಪಾಲಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಜಾಮೀನು ಪಡೆದು ಜೈಲಿನಿಂದ ಹೊರ ಬಂದಿರುವ ಕಾಮುಕ ಆರೋಪಿ, ಪಕ್ಕದ ಮನೆಯ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಭೀಕರವಾಗಿ ಮಾಡಿದ್ದಾನೆ. ಅಷ್ಟೆ ಅಲ್ಲದೆ ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ಸಹ ದಾಖಲಾಗಿವೆ. ಬಾಲಕಿಯ ಮೃತದೇವ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆದಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ.


from India & World News in Kannada | VK Polls http://bit.ly/2ZElmGu

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...