ಇದು ಜರ್ಮನಿಯಲ್ಲಿ ಕಂಡು ಬಂದ ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿ ಧರಿಸಿ ಬೆತ್ತಲೆಯಾಗಿ ಚಲಾಯಿಸಿಕೊಂಡು ರಸ್ತೆಗಿಳಿದ. ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ ಆತ ಮತ್ತೆ ಅದೇ ರೂಪದಲ್ಲಿ ಸ್ಕೂಟಿ ಚಲಾಯಿಸಿಕೊಂಡು ಹೋದ. ಜರ್ಮನಿಯಲ್ಲಿ ಉಷ್ಣಾಂಶ ತಾರಕಕ್ಕೇರಿದ್ದು 40 ಡಿಗ್ರಿ ಸೆಲ್ಸಿಯಸ್‌ಗೆ ದಾಟಿದೆ. 1947ರ ಬಳಿಕ ಇದೇ ಮೊದಲ ಬಾರಿಗೆ ಅಲ್ಲಿ ಉಷ್ಣಾಂಶ ಇಷ್ಟೊಂದು ಏರಿಕೆಯಾಗಿದೆ.
from India & World News in Kannada | VK Polls https://ift.tt/2XC72kr