ನೇಪಾಳದಲ್ಲಿ ಮುಂದುವರೆದ ವರುಣನ ಆರ್ಭಟ: ಭೂ ಕುಸಿತಕ್ಕೆ 11 ಬಲಿ

ಹೊಸದಿಲ್ಲಿ: ಪಶ್ಚಿಮ ನೇಪಾಳದ ಗುಲ್ಮಿಯಾ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿದ್ದು, ಭೂ ಕುಸಿತಕ್ಕೆ 11 ಜನ ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ. ಸತ್ಯವತಿ ಗ್ರಾಮೀಣ ಪುರಸಭೆಯ ವಾರ್ಡ್ ಸಂಖ್ಯೆ 3 ಮತ್ತು 4 ರಲ್ಲಿ ಈ ದುರ್ಷಟನೆ ಸಂಭವಿಸಿದೆ. ವರುಣನ ಆರ್ಭಟಕ್ಕೆ ಹಲವು ಮನೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭೀಕರ ಮಳೆಗೆ ಮತ್ತಷ್ಟು ಹಾನಿಯಾಗುವ ಸಂಭವ ಇದೆ ಎಂದು ಹೇಳಲಾಗುತ್ತಿದೆ. ಭೂ ಕುಸಿತದಲ್ಲಿ ನಾಪತ್ತೆಯಾದವರ ಪತ್ತೆಗೆನೇಪಾಳ ಸೇನೆ, ಪೊಲೀಸ್ ಸಿಬ್ಬಂದಿ ಸೇರಿದಂತೆ ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ. ಈ ಪ್ರದೇಶದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಕಾರಣ ಭೂ ಕುಸಿತದ ಆತಂಕ ಎದುರಾಗಿದ್ದು, ಸ್ಥಳೀಯ ನಿವಾಸಿಗಳು ಶಾಲೆಯೊಂದರಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಕಳೆದ ಕೆಲ ದಿನಗಳಿಂದ ನೇಪಾಳದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಉಂಟಾಗಿರುವ ಪ್ರವಾಹಕ್ಕೆ ಸುಮಾರು 88ಕ್ಕೂ ಅಧಿಕ ಜನ ಸಾವನ್ನಪ್ಪಿದ್ದು, ಹಲವು ಮಂದಿ ನಾಪತ್ತೆಯಾಗಿದ್ದಾರೆ.


from India & World News in Kannada | VK Polls https://ift.tt/2YlwoDn

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...