ಮಹಾರಾಷ್ಟ್ರದಲ್ಲಿ ಗೋಡೆ ಕುಸಿದು 12 ಜನರ ದಾರುಣ ಸಾವು

ಮಲಾಡ್ (ಮುಂಬಯಿ): ಕುಸಿದು 12ಕ್ಕೂ ಅಧಿಕ ಜನ ಸಾವನ್ನಪ್ಪಿರುವ ದಾರುಣ ಘಟನೆ ಮಹಾರಾಷ್ಟ್ರದ ಕರೂರ್ ಗ್ರಾಮದಲ್ಲಿ ನಡೆದಿದೆ. ಮಂಗಳವಾರ ಬೆಳ್ಳಂಬೆಳ್ಳಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾದ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಸಾಕಷ್ಟು ಎತ್ತರದ ಗೋಡೆ ಕುಸಿದು ಬಿದ್ದು 12ಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಫ್ ಪಡೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಬಿಎಂಸಿ ಟ್ವೀಟ್ ಮಾಡಿದೆ. ಈಗಾಗಾಲೇ ನಾಲ್ವರನ್ನು ರಕ್ಷಿಸಲಾಗಿದ್ದು, ಅವರನ್ನು ಶತಾಬ್ದಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಿಎಂಸಿ ತಿಳಿಸಿದೆ.


from India & World News in Kannada | VK Polls https://ift.tt/2xqJS1K

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...