ಒಂದೇ ದಿನದಲ್ಲಿ 20 ವಿಕೆಟ್ ಪತನ; ಐರ್ಲೆಂಡ್‌ಗೆ 122 ರನ್ ಮುನ್ನಡೆ

ಲಂಡನ್: ಕ್ರಿಕೆಟ್ ಕಾಶಿ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಮೊದಲು ಆತಿಥೇಯ ತಂಡವನ್ನು ಕೇವಲ 85 ರನ್‌ಗಳಿಗೆ ನಿಯಂತ್ರಿಸಿರುವ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 207 ರನ್‌ಗಳಿಗೆ ತನ್ನೆಲ್ಲ ವಿಕೆಟುಗಳನ್ನು ಕಳೆದುಕೊಂಡಿದೆ. ಇದರೊಂದಿಗೆ ಮೊದಲ ಇನ್ನಿಂಗ್ಸ್‌ನಲ್ಲಿ 122 ರನ್‌ಗಳ ಮಹತ್ವದ ಮುನ್ನಡೆ ದಾಖಲಿಸಿದೆ. ಬಳಿಕ ದ್ವಿತೀಯ ಇನ್ನಿಂಗ್ಸ್ ಆರಂಭಿಸಿರುವ ಆಂಗ್ಲರ ಪಡೆ ಒಂದು ಓವ‌ರ್‌‌ನಲ್ಲಿ ವಿಕೆಟ್ ನಷ್ಟವಾಗದಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ಟಿಮ್ ಮುರ್ತಾ ಮಾರಕ ದಾಳಿಗೆ ಸಿಲುಕಿ ಕೇವಲ 85 ರನ್ನಿಗೆ ಆಲೌಟಾಗಿತ್ತು. ಈ ಮೂಲಕ ಟೆಸ್ಟ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಟೆಸ್ಟ್ ಪಂದ್ಯದ ಮೊದಲ ದಿನದ ಪ್ರಥಮ ಅವಧಿಯಲ್ಲೇ ತನ್ನೆಲ್ಲ ವಿಕೆಟುಗಳನ್ನು ಕಳೆದುಕೊಳ್ಳುವ ಮೂಲಕ ಭಾರಿ ಮುಖಭಂಗಕ್ಕೊಳಗಾಗಿತ್ತು. ಬಳಿಕ ಉತ್ತರ ನೀಡಿದ ಐರ್ಲೆಂಡ್ ಒಂದು ಹಂತದಲ್ಲಿ ಎರಡು ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿ ಸುಸ್ಥಿತಿಯಲ್ಲಿತ್ತು. ಬಳಿಕ ಕೊನೆಯ ಎಂಟು ವಿಕೆಟುಗಳನ್ನು 75 ರನ್ ಅಂತರದಲ್ಲಿ ಕಳೆದುಕೊಳ್ಳುವ ಮೂಲಕ ನಿರಾಸೆ ಅನುಭವಿಸಿದೆ. ಐರ್ಲೆಂಡ್ ಪರ ಆಂಡ್ರ್ಯೂ ಬಲ್ಬಿರ್ನಿ 55 ರನ್ ಗಳಿಸಿ ಇನ್ನಿಂಗ್ಸ್ ಮುನ್ನಡೆ ಗಳಿಸುವಲ್ಲಿ ನೆರವಾದರು. ಇನ್ನುಳಿದಂತೆ ಪೌಲ್ ಸ್ಟಿರ್ಲಿಂಗ್ (36) ಹಾಗೂ ಕೆವಿನ್ ಓಬ್ರಿಯಾನ್ (28*) ಸಹ ಉಪಯುಕ್ತ ಇನ್ನಿಂಗ್ಸ್ ಕಟ್ಟಿದರು. ಇಂಗ್ಲೆಂಡ್ ಪರ ಸ್ಟುವರ್ಟ್ ಬ್ರಾಡ್, ಒಲ್ಲಿ ಸ್ಟೋನ್ ಹಾಗೂ ಸ್ಯಾಮ್ ಕರ್ರನ್ ತಲಾ ಮೂರು ವಿಕೆಟುಗಳನ್ನು ಹಂಚಿಕೊಂಡರು.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2Y5qV4j

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...