ಕೊನೆಗೂ ನಿವೃತ್ತಿ ಬಗ್ಗೆ ಮೌನ ಮುರಿದ ಧೋನಿ

ಲೀಡ್ಸ್: ಪ್ರಸಕ್ತ ಸಾಗುತ್ತಿರುವ ಐಸಿಸಿ 2019 ಏಕದಿನ ವಿಶ್ವಕಪ್ ಬಳಿಕ ಭಾರತದ ಹಿರಿಯ ಅನುಭವಿ ಬ್ಯಾಟ್ಸ್‌ಮನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಸಲ್ಲಿಸಲಿದ್ದಾರೆ ಎಂಬ ಬಗ್ಗೆ ವರದಿಗಳು ಬಂದಿದ್ದವು. ಪ್ರಸ್ತುತ ನಿವೃತ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತ: ಧೋನಿ ಅವರೇ ಉತ್ತರ ನೀಡಿದ್ದಾರೆ. ನಾನು ಯಾವಾಗ ನಿವೃತ್ತಿ ಮಾಡಲಿದ್ದೇನೆಂಬುದು ನನಗೆ ಗೊತ್ತಿಲ್ಲ. ಆದರೆ ಅನೇಕ ಮಂದಿ ಶ್ರೀಲಂಕಾ ಪಂದ್ಯಕ್ಕಿಂತಲೂ ಮುಂಚಿತವಾಗಿಯೇ ನಿವೃತ್ತಿ ಸಲ್ಲಿಸಲು ಬಯಸುತ್ತಿದ್ದಾರೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಏಕದಿನ ವಿಶ್ವಕಪ್‌ನಲ್ಲಿ ನಿಧಾನಗತಿಯ ಬ್ಯಾಟಿಂಗ್ ಧೋನಿ ಸಾಕಷ್ಟು ವಿಮರ್ಶೆಗಳನ್ನು ಎದುರಿಸಿದ್ದರು. ಅಲ್ಲದೆ ಆರಂಭಿಕ ಪಂದ್ಯಗಳಲ್ಲಿ ವಿಕೆಟ್ ಕೀಪಿಂಗ್ ಸಹ ಶ್ರೇಷ್ಠ ಮಟ್ಟದಲ್ಲಿರಲಿಲ್ಲ. ಈ ನಡುವೆ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗಾಯದ ಸಮಸ್ಯೆಯನ್ನು ಎದುರಿಸಿದ್ದರು. ಧೋನಿ ಬದ್ದತೆಯ ಬಗ್ಗೆ ಮಾಜಿ ಕ್ರಿಕೆಟ್ ಐಕಾನ್‌ಗಳಾದ ಸಚಿನ್ ತೆಂಡೂಲ್ಕರ್ ಹಾಗೂ ಸೌರವ್ ಗಂಗೂಲಿ ಬೊಟ್ಟು ಮಾಡಿದ್ದರು. ಇವೆಲ್ಲವೂ ಭಾರಿ ಆಕ್ರೋಶಕ್ಕೆ ಎಡೆ ಮಾಡಿಕೊಟ್ಟಿತ್ತು.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2xvy7qD

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...