ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಜೈಕಾರ ಹಾಕದ ವಿದ್ಯಾರ್ಥಿನಿಯರ ಮೇಲೆ ತೃಣಮೂಲ ಕಾಂಗ್ರೆಸ್ () ಗೂಂಡಾಗಳು ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಹೂಗ್ಲಿ ಜಿಲ್ಲೆಯ ಕಾಲೇಜೊಂದರಲ್ಲಿ ನಡೆದಿದೆ. ಅಷ್ಟೆ ಅಲ್ಲದೆ, ವಿದ್ಯಾರ್ಥಿನಿಯರ ರಕ್ಷಣೆಗೆ ಬಂದ ಪ್ರಾಧ್ಯಾಪಕರನ್ನು ಸಹ ಟಿಎಂಸಿ ಗೂಂಡಾ ಕಾರ್ಯಕರ್ತರು ಅಮಾನವೀಯವಾಗಿ ಥಳಿಸುವ ಮೂಲಕ ಅಟ್ಟಹಾಸ ಮೆರೆದಿದ್ದಾರೆ. ಕಾಲೇಜು ಆವರಣಕ್ಕೆ ಬಂದ ಸಿಎಂ ಕಾರ್ಯಕರ್ತರು, 'ಮಮತಾ ಬ್ಯಾನರ್ಜಿ ಜಿಂದಾಬಾದ್' ಘೋಷಣೆ ಕೂಗುವಂತೆ ವಿದ್ಯಾರ್ಥಿನಿಯರನ್ನು ಒತ್ತಾಯಿಸಿದ್ದಾರೆ. ಆದರೆ, ಇದಕ್ಕೆ ವಿದ್ಯಾರ್ಥಿನಿಯರು ನಿರಾಕರಿಸಿದ್ದಕ್ಕೆ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಘಟನೆ ಸಂಬಂಧ ಟಿಎಂಸಿ ಕಾರ್ಯಕರ್ತರ ವಿರುದ್ಧ ಕಾಲೇಜು ಆಡಳಿತ ಮಂಡಳಿ ದೂರು ದಾಖಲಿಸಿದೆ.
from India & World News in Kannada | VK Polls https://ift.tt/2YwNfn6