ಹೊಸದಿಲ್ಲಿ: 2019-20ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ಮಂಡಿಸಿದ್ದಾರೆ. ಅಲ್ಲದೆ ಅನೇಕ ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಕ್ರೀಡಾ ಕ್ಷೇತ್ರದಲ್ಲೂ ಅಭಿವೃದ್ಧಿ ಮಂತ್ರವನ್ನು ಪಠಿಸಿದ್ದಾರೆ. ಖೇಲೋ ಇಂಡಿಯಾ ಅಭಿಯಾನದ ಅಡಿಯಲ್ಲಿ ಸ್ಥಾಪನೆಗೆ ಶಿಫಾರಸು ಮಾಡಿದ್ದಾರೆ. ಸಂಸತ್ತಿನಲ್ಲಿ ನಡೆದ ಬಜೇಟ್ ಅಧಿವೇಶನದಲ್ಲಿ ಮಾತನಾಡಿದ ಸೀತಾರಾಮನ್, ಎಲ್ಲ ವಲಯದಲ್ಲೂ ಕ್ರೀಡೆಯನ್ನು ಜನಪ್ರಿಯಗೊಳಿಸಲು ಕ್ರೀಡಾಪಟುಗಳಿಗಾಗಿ ಖೇಲೋ ಇಂಡಿಯಾ ಕಾರ್ಯಕ್ರಮದ ಅಡಿಯಲ್ಲಿ ರಾಷ್ಟ್ರೀಯ ಕ್ರೀಡಾ ಶಿಕ್ಷಣ ಮಂಡಳಿಯನ್ನು ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದರು. ಭಾರತ ಸರಕಾರದ ಮಹತ್ತರ ಯೋಜನೆಗಳಲ್ಲಿ ಖೇಲೋ ಇಂಡಿಯಾ ಒಂದಾಗಿದೆ. ಕ್ರೀಡಾ ವಾತವಾರಣವನ್ನು ಉತ್ತೇಜಿಸುವುದು ಹಾಗೂ ಬಲಪಡಿಸುವುದರ ಜತೆಗೆ ಹೆಚ್ಚಿನ ಸಂಖ್ಯೆಯ ಭಾಗವಹಿಸುವುದಕ್ಕೆ ಪ್ರೋತ್ಸಾಹ ತುಂಬುತ್ತದೆ. ಈ ಎಲ್ಲದರ ಮೂಲಕ ಪ್ರತಿಭೆಗಳನ್ನು ಗುರುತಿಸಿ ಬೆಳಕಿಗೆ ತರಲು ಗುರಿ ಹೊಂದಿದೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2LHZg2d