ಚಹಲ್, ಶಮಿಗೆ ವಿಶ್ರಾಂತಿ; ಕುಲ್‌ದೀಪ್, ಜಡೇಜಾ ಇನ್

ಲೀಡ್ಸ್: ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಶನಿವಾರ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಕೊನೆಯ ಲೀಗ್ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ ಪ್ರಮುಖವಾಗಿಯೂ ಎರಡು ಬದಲಾವಣೆ ತರಲಾಗಿದೆ. ಆಗಲೇ ಸೆಮಿಫೈನಲ್ ತಲುಪಿರುವ ಭಾರತ ತಂಡದಲ್ಲಿ ಎರಡು ಬದಲಾವಣೆಗಳನ್ನು ತರಲಾಗಿದೆ. ಇದರಂತೆ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಹಾಗೂ ಬಲಗೈ ವೇಗಿ ಮೊಹಮ್ಮದ್ ಶಮಿ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇವರಿಬ್ಬರ ಸ್ಥಾನಗಳಿಗೆ ಚೈನಮಾನ್ ಖ್ಯಾತಿಯ ಕುಲ್‌ದೀಪ್ ಯಾದವ್ ಹಾಗೂ ಆಲ್‌ರೌಂಡರ್ ತಂಡವನ್ನು ಸೇರಿಕೊಂಡಿದ್ದಾರೆ. ಇನ್ನೊಂದೆಡೆ ದಿನೇಶ್ ಕಾರ್ತಿಕ್ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅತ್ತ ಕೇದಾರ್ ಜಾಧವ್ ಮಗದೊಮ್ಮೆ ಅವಕಾಶ ವಂಚಿತವಾಗಿದ್ದಾರೆ. ಸೆಮಿಫೈನಲ್‌ನಲ್ಲಿ ಭಾರತ ತಂಡಕ್ಕೆ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ಪೈಕಿ ಯಾರ ಸವಾಲು ಎದುರಾಗಲಿದೆ ಎಂಬುದು ಕುತೂಹಲವೆನಿಸಿದೆ. ಈ ನಿಟ್ಟಿನಲ್ಲಿ ಈ ಪಂದ್ಯ ಅತ್ಯಂತ ಮುಖ್ಯವೆನಿಸಿದೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2L1kgBv

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...