ಮುಂಬಯಿ: ಸರಕಾರಿ ಅಧಿಕಾರಿ ಮೇಲೆ ಬಿಜೆಪಿ ಸಂಸದ ಪುತ್ರ ಬ್ಯಾಟ್‌ನಿಂದ ಹಲ್ಲೆ ಮಾಡಿದ್ದ ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ವರದಿಯಾಗಿದೆ. ಈ ಬಾರಿ ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಪುತ್ರ ಸರಕಾರಿ ಎಂಜಿನಿಯರ್ ಮೇಲೆ ಕೆಸರು ಚೆಲ್ಲಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ಈ ಘಟನೆ ನಡೆದಿದೆ. ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಪುತ್ರ ಕಾಂಗ್ರೆಸ್ ಶಾಸಕ ಎಂಜಿನಿಯರ್ ಮೇಲೆ ಕೆಸರು ಹಾಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೇ ಬ್ರಿಡ್ಜ್‌ಗೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದಾರೆ. ಎಂಜಿನಿಯರ್ ಮೇಲೆ ಹಲ್ಲೆ ನಡೆಸಿದ ನಿತೀಶ್ ರಾಣೆ ಪೊಲೀಸರ ಮುಂದೆ ಶರಣಾಗಿದ್ದಾರೆ. ಮಹಾರಾಷ್ಟ್ರ-ಗೋವಾ ನಡುವಿನ ಹೆದ್ದಾರಿಯ ರಸ್ತೆ ಕಾಮಗಾರಿ ಪರಿಶೀಲಿಸಲು ಶಾಸಕ ನಿತೀಶ್ ತೆರಳಿದ್ದರು. ಈ ವೇಳೆ ಕಾಮಗಾರಿ ಪರಿಶೀಲಿಸಿ ಎಂಜಿನಿಯರ್ ಮೇಲೆ ಹಲ್ಲೆ ಮಾಡಿದ್ದರು. ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
from India & World News in Kannada | VK Polls https://ift.tt/2Yy1ZP0