ಅಫ್ಘಾನ್‌ನಲ್ಲಿ ಭಯೋತ್ಪಾದಕರ ಅಟ್ಟಹಾಸ: ತ್ರಿವಳಿ ಸ್ಫೋಟದಲ್ಲಿ ಐವರ ಸಾವು

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಉಗ್ರರು ಅಟ್ಟಾಹಾಸ ಮುಂದುವರೆದಿದ್ದು, ಕಾಬೂಲ್‌ನಲ್ಲಿ ಸಂಭವಿಸಿದ ತ್ರಿವಳಿ ಸ್ಫೋಟದಲ್ಲಿ ಕನಿಷ್ಠ 5ಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ. ಅಫ್ಘಾನಿಸ್ತಾನ್‌ದಲ್ಲಿ ಹೆಚ್ಚುತ್ತಿರುವ ಹಿಂಸಾಚಾರದ ನಡುವೆಯೇ ಭಯೋತ್ಪಾದಕರು ಈ ದಾಳಿ ನಡೆಸಿದ್ದು, ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಗುರುವಾರ ಮುಂಜಾನೆ 8.10ರ ಸುಮಾರಿಗೆ ಪೂರ್ವ ಕಾಬೂಲ್‌ನಲ್ಲಿ ಮೋಟಾರ್ ಸೈಕಲ್ ಮೇಲೆ ಬಂದ ಆತ್ಮಾಹುತಿ ಬಾಂಬರ್, ಗಣಿ ಮತ್ತು ಪೆಟ್ರೋಲಿಯಂ ಸಚಿವಾಲಯಕ್ಕೆ ಸೇರಿದ್ದ ಬಸ್‌ಗೆ ಡಿಕ್ಕಿ ಹೊಡೆದು ಸ್ಫೋಟಿಸಿಕೊಂಡಿದ್ದಾನೆ ಎಂದು ಅಫ್ಘಾನ್ ಆಂತರಿಕ ಸಚಿವಾಲಯದ ವಕ್ತಾರ ನಸ್ರತ್ ರಹೀಮಿ ತಿಳಿಸಿದ್ದಾರೆ. ಅಷ್ಟೆ ಅಲ್ಲದೆ, ಪೂರ್ವ ಕಾಬೂಲ್‌ನ ವಿವಿಧೆಡೆ ಕಾರು ಬಾಂಬ್ ಸೇರಿದಂತೆ ಮತ್ತೆರಡು ಸ್ಫೋಟಗಳು ಸಂಭವಿಸಿವೆ ಎಂದು ರಹೀಮಿ ತಿಳಿಸಿದ್ದಾರೆ. ಇಲ್ಲಿಯವರೆಗೂ ಯಾವುದೇ ಭಯೋತ್ಪಾದಕ ಸಂಘಟನೆ ದಾಳಿಯ ಹೊಣೆ ಹೊತ್ತಿಲ್ಲ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


from India & World News in Kannada | VK Polls https://ift.tt/2JQIQTR

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...