ಕಾಸರಗೋಡು ಜಿಲ್ಲೆಯಲ್ಲಿ ಭಾರಿ ಮಳೆ ನಿರೀಕ್ಷೆ: ರೆಡ್ ಅಲರ್ಟ್ ಘೋಷಣೆ

ಕಾಸರಗೋಡು: ಭಾರೀ ಮಳೆಯ ಹಿನ್ನೆಲೆಯಲ್ಲಿ ಕಾಸರಗೋಡು ಹಾಗೂ ಕಣ್ಣೂರು ಜಿಲ್ಲೆಗಳಲ್ಲಿ ಕೇಂದ್ರ ಹವಾಮಾನ ಕೇಂದ್ರ ಜು.23ಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ. ಡಿ.ಸಜಿತ್‌ಬಾಬು ರಜೆ ಘೋಷಿಸಿದ್ದಾರೆ. ಜು.24ಕ್ಕೆ ಕಾಸರಗೋಡು, ಕಣ್ಣೂರು, ಕೋಯಿಕೋಡ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜು.25ರಂದು ಕಾಸರಗೋಡು, ಕಣ್ಣೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಿರಂತರ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ಬಹುತೇಕ ಹೊಳೆಗಳು ಉಕ್ಕಿ ಹರಿಯುತ್ತಿದೆ. ಪ್ರಧಾನ ಹೊಳೆಯಾದ ಪಯಸ್ವಿನಿ ಹೊಳೆಯಲ್ಲಿ ಅರ್ಧದಷ್ಟು ನೀರಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಪ್ರಳಯ ಭೀತಿಯಿಂದ ಕೂಡಿದೆ. ಅಲ್ಲದೇ ಕರಾವಳಿ ತೀರಪ್ರದೇಶಗಳಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ. ಮುಂಗಾರು ಆರಂಭಗೊಂಡ ಬಳಿಕ ನಿರಂತರವಾಗಿ ಸುರಿಯುವ ಮಳೆಯಿಂದಾಗಿ ಜಿಲ್ಲೆಯಲ್ಲಿ ಎರಡು ಮನೆ ಪೂರ್ಣವಾಗಿಯೂ, ಸುಮಾರು 70ರಷ್ಟು ಮನೆಗಳು ಭಾಗಿಕವಾಗಿ ಹಾನಿಯಾಗಿದೆ. ಮುಂಗಾರು ಆರಂಭಗೊಂಡ ಬಳಿಕ ಜಿಲ್ಲೆಯಲ್ಲಿ ಈ ತನಕ ಗಾಳಿ ಮಳೆಯಿಂದಾಗಿ 60 ಹೆಕ್ಟರ್ ಕೃಷಿ ಪ್ರದೇಶ ನಾಶವಾಗಿದ್ದು, ಕೋಟ್ಯಂತರ ರೂ. ನಷ್ಟ ಅಂದಾಜಿಸಲಾಗಿದೆ. ನಿರಂತರ ಮಳೆಯಿಂದಾಗಿ ಜಿಲ್ಲೆಯ ವಿವಿಧ ಕಡೆ ಗುಡ್ಡ ಕುಸಿತ, ಪ್ರಕೃತಿ ದುರಂತ ನಡೆಯುವ ಕಾರ್ಯಕ್ರಮ ಮುನ್ನೆಚ್ಚರಿಕೆಯನ್ನು ರಾಜ್ಯ ವಿಪತ್ತು ನಿರ್ವಹಣೆ ಪ್ರಾಧಿಕಾರ ನೀಡಿದೆ.


from India & World News in Kannada | VK Polls https://ift.tt/2M3huew

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...