ಸಚಿನ್, ದಾದಾ ಎಲೈಟ್ ಪಟ್ಟಿಗೆ ಸೇರಿದ ಕೊಹ್ಲಿ

ಮ್ಯಾಂಚೆಸ್ಟರ್: ಭಾರತ ಕ್ರಿಕೆಟ್ ತಂಡದ ನಾಯಕ ಏಕದಿನ ವಿಶ್ವಕಪ್‌ನಲ್ಲಿ ಸಹಸ್ರ ರನ್ ದಾಖಲೆ ಬರೆದಿದ್ದಾರೆ. ಈ ಮೂಲಕ ಭಾರತದ ಮಾಜಿ ದಿಗ್ಗಜರಾದ ಹಾಗೂ ಎಲೈಟ್ ಪಟ್ಟಿಗೆ ಸೇರಿದ್ದಾರೆ. ಇಂಗ್ಲೆಂಡ್ ಹಾಗೂ ವೇಲ್ಸ್‌ನಲ್ಲಿ ಸಾಗುತ್ತಿರುವ ಐಸಿಸಿ 2019 ಏಕದಿನ ವಿಶ್ವಕಪ್‌ನಲ್ಲಿ ಶ್ರೀಲಂಕಾ ವಿರುದ್ಧ ನಡೆದ ಕೊನೆಯ ಲೀಗ್ ಪಂದ್ಯದಲ್ಲಿ ಕೊಹ್ಲಿ ಈ ಮಹತ್ತರ ಮೈಲುಗಲ್ಲು ತಲುಪಿದರು. ದಾಖಲೆಗಳ ಮೇಲೆ ದಾಖಲೆಗಳನ್ನು ಬರೆಯುತ್ತಲೇ ಸಾಗುತ್ತಿರುವ ವಿರಾಟ್ ಕೊಹ್ಲಿ 25 ಇನ್ನಿಂಗ್ಸ್‌ಗಳಲ್ಲಿ 1029 ರನ್ ಕಲೆ ಹಾಕಿದ್ದಾರೆ. ಇನ್ನೊಂದೆಡೆ ವಿರಾಟ್ ಹಿಂಬಾಲಿಸುತ್ತಿರುವ ರೋಹಿತ್ ಶರ್ಮಾ 16 ಇನ್ನಿಂಗ್ಸ್‌ಗಳಲ್ಲೇ 977 ರನ್ ಕಲೆ ಹಾಕಿದ್ದಾರೆ. ಈ ಮೂಲಕ ಮಗದೊಂದು ದಾಖಲೆಯ ಸನಿಹದಲ್ಲಿದ್ದಾರೆ. ಈ ಪೈಕಿ ಪ್ರಸಕ್ತ ಸಾಲಿನ ವಿಶ್ವಕಪ್‌ನಲ್ಲಿ ಎಂಟು ಇನ್ನಿಂಗ್ಸ್‌ಗಳಲ್ಲಿ ರೋಹಿತ್ 634 ರನ್ ಕಲೆ ಹಾಕಿದ್ದಾರೆ. ಹಾಗೆಯೇ ವಿಶ್ವಕಪ್‌ನಲ್ಲಿ ಆರನೇ ಶತಕ ಬಾರಿಸುವ ಮೂಲಕ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಸರಿಗಟ್ಟಿದ್ದಾರೆ. ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳು: ಸಚಿನ್ ತೆಂಡೂಲ್ಕರ್: 2278 (44 ಇನ್ನಿಂಗ್ಸ್) ವಿರಾಟ್ ಕೊಹ್ಲಿ: 1029 (25 ಇನ್ನಿಂಗ್ಸ್) ಸೌರವ್ ಗಂಗೂಲಿ: 1006 (21 ಇನ್ನಿಂಗ್ಸ್) ರೋಹಿತ್ ಶರ್ಮಾ: 977 (16 ಇನ್ನಿಂಗ್ಸ್) ರಾಹುಲ್ ದ್ರಾವಿಡ್: 860 (21 ಇನ್ನಿಂಗ್ಸ್)


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/32gagtd

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...