ಸಚಿನ್ ಮಹಾನ್ ವಿಶ್ವದಾಖಲೆ ಸರಿಗಟ್ಟಿದ ರೋ'ಹಿಟ್'

ಲೀಡ್ಸ್: ಏಕದಿನ ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಆರು ಶತಕಗಳನ್ನು ಬಾರಿಸಿರುವ ಭಾರತ ಕ್ರಿಕೆಟ್ ತಂಡದ ಉಪನಾಯಕ , ಮಾಜಿ ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್ ಮಹಾನ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಐಸಿಸಿ 2019 ಏಕದಿನ ವಿಶ್ವಕಪ್‌ವೊಂದರಲ್ಲೇ ಐದು ಶತಕಗಳನ್ನು ಬಾರಿಸಿದ ವಿಶ್ವದ ಮೊತ್ತ ಮೊದಲ ಬ್ಯಾಟ್ಸ್‌ಮನ್ ಎಂಬ ದಾಖಲೆಗೂ ರೋಹಿತ್ ಶರ್ಮಾ ಭಾಜನವಾಗಿದ್ದಾರೆ. ಮಗದೊಂದು ಶತಕವೂ 2015ನೇ ವಿಶ್ವಕಪ್‌ನಲ್ಲಿ ದಾಖಲಾಗಿತ್ತು. ಅಷ್ಟೇ ಯಾಕೆ ಪ್ರಸಕ್ತ ಸಾಲಿನ ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್ ಶತಕ ಸಾಧನೆಯನ್ನು ಮಾಡಿದ್ದಾರೆ. ಇಂಗ್ಲೆಂಡ್, ಬಾಂಗ್ಲಾದೇಶ ಬಳಿಕ ಶ್ರೀಲಂಕಾ ವಿರುದ್ಧ ಸತತ ಶತಕಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ಏಳು ದಿನಗಳ ಅಂತರದಲ್ಲಿ ಹ್ಯಾಟ್ರಿಕ್ ಶತಕ ಬಾರಿಸಿದ್ದಾರೆ. ರೋಹಿತ್ ಶರ್ಮಾ ಆರು ಶತಕಗಳು ಕೇವಲ 16 ಇನ್ನಿಂಗ್ಸ್‌ಗಳಲ್ಲಿ ದಾಖಲಾಗಿರುವುದು ಗಮನಾರ್ಹವೆನಿಸುತ್ತದೆ. ಅಷ್ಟೇ ಯಾಕೆ ಏಕದಿನದಲ್ಲ 27ನೇ ಶತಕ ಬಾರಿಸುವ ಮೂಲಕ ದಕ್ಷಿಣ ಆಫ್ರಿಕಾದ ಹಾಶೀಮ್ ಆಮ್ಲಾ ದಾಖಲೆಯನ್ನು ಸರಿಗಟ್ಟಿದ್ದಾರೆ. ಏಕದಿನ ವಿಶ್ವಕಪ್‌ನಲ್ಲಿ ಗರಿಷ್ಠ ಶತಕಗಳು (ಶತಕ/ಇನ್ನಿಂಗ್ಸ್) 6/16 ರೋಹಿತ್ ಶರ್ಮಾ 6/44 ಸಚಿನ್ ತೆಂಡೂಲ್ಕರ್ 5/42 ರಿಕಿ ಪಾಂಟಿಂಗ್ 5/35 ಕುಮಾರ ಸಂಗಕ್ಕರ 4/21 ಸೌರವ್ ಗಂಗೂಲಿ


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2LGRxRZ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...