ಸಂಸತ್ತಿನಲ್ಲಿ ಕನ್ನಡದಲ್ಲೇ ಧ್ವನಿ ಎತ್ತಿ ನೀರು ಕೇಳಿದ ಮಂಡ್ಯ ಸಂಸದೆ ಸುಮಲತಾ

ಹೊಸದಿಲ್ಲಿ: ಕರ್ನಾಟಕ ಮತ್ತು ನನ್ನ ಕ್ಷೇತ್ರವಾದ ಮಂಡ್ಯಕ್ಕೆ ನೀರಿನ ಸಮಸ್ಯೆ ಉಂಟಾಗಿದ್ದು, ಕುಡಿಯುವ ನೀರಿಗಾಗಿಯೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಬಿಡಿ ಎಂದು ಮಂಡ್ಯ ಲೋಕಸಭೆ ಕ್ಷೇತ್ರದ ಸಂಸದೆ ಸಂಸತ್ತಿನಲ್ಲಿ ಕನ್ನಡದಲ್ಲಿಯೇ ಧ್ವನಿ ಎತ್ತುವ ಮೂಲಕ ಗಮನ ಸೆಳೆದಿದ್ದಾರೆ. ಇಂದು ಸಂಸತ್ತಿನಲ್ಲಿ ಮಾತನಾಡಿದ , ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗಿದೆ. ನೀರಿಲ್ಲದೆ ರೈತರು ಸಂಕಷ್ಟದ ಸ್ಥಿತಿ ತಲುಪಿದ್ದಾರೆ. ನಾವೆಲ್ಲ ಅವರ ಬೆನ್ನಿಗೆ ನಿಲ್ಲಬೇಕಾಗಿದೆ. ಕೂಡಲೇ ರಾಜ್ಯಕ್ಕೆ ನೀರು ಬಿಡುವಂತೆ ಒತ್ತಾಯಿಸಿದ್ದಾರೆ. 17ನೇ ಸಾರ್ವತ್ರಿಕ ಚುನಾವಣೆಯಲ್ಲಿ ಮಂಡ್ಯ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಸುಮಲತಾ ಅವರು, ಮೈತ್ರಿ ಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಪರಾಭವಗೊಳಿಸಿ ಲೋಕಸಭೆಗೆ ಆಯ್ಕೆಯಾಗಿದ್ದುರು. ಇಂದು ಸಂಸತ್ತಿನಲ್ಲಿ ಕನ್ನಡದಲ್ಲಿಯೇ ಚೊಚ್ಚಲ ಭಾಷಣ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.


from India & World News in Kannada | VK Polls https://ift.tt/2KW7ggi

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...