ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಆರು ತಿಂಗಳ ಕಾಲ ವಿಸ್ತರಣೆ

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಇನ್ನೂ ಆರು ತಿಂಗಳ ಕಾಲ ವಿಸ್ತರಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಇನ್ನೂ ಆರು ತಿಂಗಳ ಕಾಲ ವಿಸ್ತರಿಸುವ ಪ್ರಸ್ತಾವವನ್ನು ಗೃಹಸಚಿವ ರಾಜ್ಯಸಭೆಯಲ್ಲಿ ಸೋಮವಾರ ಮಂಡಿಸಿದರು. ಈ ಪ್ರಸ್ತಾವ ಧ್ವನಿಮತದ ಅಂಗೀಕಾರಗೊಂಡಿದೆ. ಜಮ್ಮು-ಕಾಶ್ಮೀರ ಮೀಸಲು (ತಿದ್ದುಪಡಿ) ವಿಧೇಯಕ -2019 ಕೂಡ ಧ್ವನಿಮತದ ಮೂಲಕ ಅಂಗೀಕಾರಗೊಂಡಿದೆ. ಇದರೊಂದಿಗೆ ಜಮ್ಮು ಕಾಶ್ಮೀರದಲ್ಲಿ ಇನ್ನೂ ಆರು ತಿಂಗಳ ಕಾಲ ವಿಸ್ತರಣೆಯಾಗಿದೆ. ಈ ಪ್ರಸ್ತಾವ ಮಂಡಿಸಿ ಮಾತನಾಡಿದ ಗೃಹ ಸಚಿವ ಅಮಿತ್‌ ಶಾ, ಜಮ್ಮು ಕಾಶ್ಮೀರದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಯೋಜನೆಗಳ ಬಗ್ಗೆ ವಿವರಿಸಿದರು. ಜಮ್ಮು ಕಾಶ್ಮೀರದಲ್ಲಿ ಭದ್ರತೆಗೆ ಹೆಚ್ಚು ಒತ್ತು ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದ ಮುಖ್ಯ ಉದ್ದೇಶವೇ ಇದಾಗಿದೆ. ಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಕಣಿವೆ ರಾಜ್ಯದಲ್ಲಿ ಉಗ್ರವಾದಕ್ಕೆ ಬಂಡವಾಳ ಪೂರೈಕೆಯಾಗುತ್ತಿದುದು ಸಂಪೂರ್ಣ ಬಂದ್‌ ಆಗಿದೆ ಎಂದು ಸಚಿವ ಅಮಿತ್‌ ಶಾ ತಿಳಿಸಿದರು.


from India & World News in Kannada | VK Polls https://ift.tt/2RMgiNy

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...