ಕಾರ್ಗಿಲ್ ವಿಜಯ ದಿನ; ಧೀರ ಯೋಧರನ್ನು ಸ್ಮರಿಸಿದ ಕ್ರಿಕೆಟಿಗರು

ಹೊಸದಿಲ್ಲಿ: ನೆರೆಯ ಪಾಕಿಸ್ತಾನ ವಿರುದ್ಧ ನಡೆದ ಕಾರ್ಗಿಲ್ ಯುದ್ಧದಲ್ಲಿ ಗೆಲುವು ದಾಖಲಿಸಿ ಇಂದಿಗೆ (ಜುಲೈ 26) 20 ವರ್ಷಗಳೇ ಸಂದಿದೆ. ಇದರಂತೆ ದೇಶದ್ಯಾಂತ ಸಂಭ್ರಮ ಮನೆ ಮಾಡಿದೆ. ಇದೀಗ ಭಾರತೀಯ ಕ್ರಿಕೆಟಿಗರು ಸಹ ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಬಲಿದಾನ ಮಾಡಿದ ಧೀರ ಯೋಧರನ್ನು ಸ್ಮರಿಸಿದ್ದಾರೆ. ಟೀಮ್ ಇಂಡಿಯಾ ನಾಯಕ , ತಮ್ಮ ಟ್ವಿಟರ್ ಪೋಸ್ಟ್‌ನಲ್ಲಿ ದೇಶಕ್ಕಾಗಿ ನೀವು ಮಾಡಿದ ಬಲಿದಾನವನ್ನು ನಾವೆಂದು ಮರೆಯಲಾರೆವು ಎಂದು ಧೀರ ಯೋಧರಿಗೆ ಗೌರವ, ಪ್ರೀತಿ ಹಂಚಿಕೊಳ್ಳುತ್ತಾ ಸೆಲ್ಯೂಟ್ ಹೊಡೆದಿದ್ದಾರೆ. ಕ್ರಿಕೆಟ್ ನಿವೃತ್ತಿಯ ಬಳಿಕ ಸಕ್ರಿಯ ರಾಜಕಾರಣಕ್ಕಿಳಿದು ಬಿಜೆಪಿ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿರುವ ಗೌತಮ್ ಗಂಭೀರ್ ಸಹ ದೇಶದ ಜವಾನರನ್ನು ಸ್ಮರಿಸಿದ್ದಾರೆ. 1999ನೇ ಇಸವಿಯಲ್ಲಿ ಪಾಕಿಸ್ತಾನ ವಿರುದ್ದ ನಡೆದ ಯುದ್ಧದಲ್ಲಿ ಭಾರತ ಐತಿಹಾಸಿಕ ಗೆಲುವನ್ನು ದಾಖಲಿಸಿತ್ತು.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2JZjq4Y

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...