ಮುಂಬಯಿ: ಆಘಾತಕಾರಿ ಘಟನೆಯೊಂದರಲ್ಲಿ ಹಾಡಹಗಲೇ ಅಪರಿಚಿತ ವ್ಯಕ್ತಿಗಳಿಬ್ಬರು 25 ವರ್ಷದ ಯುವತಿಗೆ ಚಾಕುವಿನಿಂದ ಇರಿದು ಮಾಡಿರುವ ಘಟನೆ ಮಹಾರಾಷ್ಟ್ರದ ಕಲ್ಯಾಣದಲ್ಲಿ ನಡೆದಿದೆ. ಬೈಕ್ ಮೇಲೆ ಬಂದ ದುಷ್ಕರ್ಮಿಗಳು ಯುವತಿಗೆ ಹಲವು ಬಾರಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ತನಿಖೆ ಬಳಿಕವಷ್ಟೆ ಘಟನೆಗೆ ಸ್ಪಷ್ಟ ಕಾರಣ ತಿಳಿಯಲಿದೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಶಂಕಿತ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.
from India & World News in Kannada | VK Polls https://ift.tt/32912yY