ದೇಶದ್ರೋಹ ಪ್ರಕರಣ: ವೈಕೋಗೆ ಒಂದು ವರ್ಷ ಜೈಲು ಶಿಕ್ಷೆ

ಚೆನ್ನೈ: ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಡಿಎಂಕೆ ಪ್ರಧಾನ ಕಾರ್ಯದರ್ಶಿ ವೈಕೋಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಸಂಬಂಧ ತಪ್ಪಿತಸ್ಥರೆಂದು ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. 2009ರಲ್ಲಿ ಶ್ರೀಲಂಕಾದ ಎಲ್‌ಟಿಟಿಇ ಸಂಘಟನೆ ಬೆಂಬಲಿಸಿ ವೈಕೋ ಭಾಷಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವೈಕೋ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಐಪಿಸಿ ಸೆಕ್ಷನ್‌ 124 (ಎ) ಅಡಿಯಲ್ಲಿ ತಪ್ಪಿತಸ್ಥರೆಂದು 1 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಲಾಗಿದೆ. ತೀರ್ಪಿನ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ವೈಕೋ, ಈ ತೀರ್ಪಿಗೆ ನಾನು ಹೆದರಲಾರೆ, ಇನ್ನೂ ಹೆಚ್ಚಿನ ಶಿಕ್ಷೆ ನೀಡಿ ಎದುರಿಸುವೆ ಎಂದಿದ್ದಾರೆ.


from India & World News in Kannada | VK Polls https://ift.tt/2Xqr1yn

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...