ನಾನು ಕಾಂಗ್ರೆಸ್‌ ಅಧ್ಯಕ್ಷನಲ್ಲ, ಹೊಸ ಅಧ್ಯಕ್ಷರ ನೇಮಕವಾಗಬೇಕು: ರಾಹುಲ್‌

ಹೊಸದಿಲ್ಲಿ: ನಾನು ಕಾಂಗ್ರೆಸ್‌ ಅಧ್ಯಕ್ಷನಲ್ಲ. ಪಕ್ಷದ ಕಾರ್ಯಕಾರಿ ಸಮಿತಿ ಕೂಡಲೇ ಸಭೆ ಸೇರಿ ಹೊಸ ಅಧ್ಯಕ್ಷನ ಆಯ್ಕೆ ಮಾಡಬೇಕು ಎಂದು ತಿಳಿಸಿದ್ದಾರೆ. ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್‌, ನಾನು ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಈಗ ಉತ್ತರಾಧಿಕಾರಿ ನೇಮಕ ಮಾಡುವ ಜವಾಬ್ದಾರಿ ನಾಯಕರ ಮೇಲಿದೆ ಎಂದರು. ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಕೂಡಲೇ ಸಭೆ ಸೇರಿ ಕಾಂಗ್ರೆಸ್‌ಗೆ ನೂತನ ಅಧ್ಯಕ್ಷರ ಮಾಡಬೇಕು. ಅತಿ ಶೀಘ್ರದಲ್ಲೇ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂಬ ಭರವಸೆ ನನಗಿದೆ ಎಂದು ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಅತ್ಯಂತ ಹೀನಾಯವಾಗಿ ಪರಾಭವಗೊಂಡ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಹುಲ್‌ ಗಾಂಧಿ ರಾಝೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಕೇವಲ 52 ಸ್ಥಾನ ಪಡೆದುಕೊಂಡಿತ್ತು. ನಂತರ ರಾಹುಲ್‌ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರ ಕೈಗೊಂಡರು. ಆದರೆ ರಾಹುಲ್‌ ಪಕ್ಷವನ್ನು ಮುನ್ನಡೆಸಬೇಕು ಎಂದು ಎಲ್ಲ ಕಾಂಗ್ರೆಸ್‌ ನಾಯಕರು ಒತ್ತಡ ಹೇರಿದರು. ಆದರೆ ರಾಹುಲ್‌ ಗಾಂಧಿ ಇದಕ್ಕೆ ಸೊಪ್ಪು ಹಾಕಲಿಲ್ಲ. ಈಗ ಕಾಂಗ್ರೆಸ್‌ ಪಕ್ಷ ಹೊಸ ಅಧ್ಯಕ್ಷನ ಹುಡುಗಾಟ ನಡೆಸಬೇಕಾಗಿದೆ.


from India & World News in Kannada | VK Polls https://ift.tt/2Xq8iYw

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...