ಇಂಗ್ಲೆಂಡ್ ವಿರುದ್ಧ ಸೋಲಿನಿಂದ ದ್ವಿತೀಯ ಸ್ಥಾನಕ್ಕೆ ಕುಸಿದ ಭಾರತ

ಬರ್ಮಿಂಗ್‌ಹ್ಯಾಮ್: ಐಸಿಸಿ ಏಕದಿನ ತಂಡ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿರುವ ಕೆಲವೇ ದಿನಗಳಲ್ಲಿ ಭಾರತ ದ್ವಿತೀಯ ಸ್ಥಾನಕ್ಕೆ ಕುಸಿತ ಅನುಭವಿಸಿದೆ. ಪ್ರಸಕ್ತ ಸಾಗುತ್ತಿರುವ ಐಸಿಸಿ 2019 ಏಕದಿನ ವಿಶ್ವಕಪ್‌ನಲ್ಲಿ ಗೆಲುವಿನ ಓಟ ಮುಂದುವರಿಸಿದ ಭಾರತಕ್ಕೆ ಆತಿಥೇಯ ಇಂಗ್ಲೆಂಡ್ ಕೈಯಿಂದ ಸೋಲಿನ ಏಟು ಲಭಿಸಿತ್ತು. ಇದರೊಂದಿಗೆ ಭಾರತವನ್ನು ಹಿಂದಕ್ಕೆ ತಳ್ಳಿರುವ ಇಂಗ್ಲೆಂಡ್ ಮಗದೊಮ್ಮೆ ಅಗ್ರಸ್ಥಾನಕ್ಕೇರಿದೆ. ಮೊದಲ ಆರು ಪಂದ್ಯಗಳ ಪೈಕಿ ಭಾರತ ಐದರಲ್ಲಿ ಗೆಲುವು ದಾಖಲಿಸಿತ್ತು. ಅತ್ತ ಇಂಗ್ಲೆಂಡ್ ಪಾಕಿಸ್ತಾನ, ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ವಿರುದ್ಧ ಸೋಲಿಗೆ ಶರಣಾಗಿತ್ತು. ಪರಿಣಾಮ ಭಾರತ ನಂ.1 ಪಟ್ಟ ಆಲಂಕರಿಸಿತ್ತು. ಆದರೆ ಗೆಲ್ಲಲೇಬೇಕಾದ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡವನ್ನು ಸೋಲಿಸಿರುವ ಇಂಗ್ಲೆಂಡ್ 123 ರೇಟಿಂಗ್ ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದೆ. ಅತ್ತ 122 ಅಂಕಗಳನ್ನು ಹೊಂದಿರುವ ಭಾರತ ಎರಡನೇ ಸ್ಥಾನದಲ್ಲಿದೆ. ಇನ್ನು 113 ರೇಟಿಂಗ್ ಅಂಕಗಳನ್ನು ಹಂಚಿಕೊಂಡಿರುವ ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ಅನುಕ್ರಮವಾಗಿ ಮೂರು ಹಾಗೂ ನಾಲ್ಕನೇ ಸ್ಥಾನಗಳನ್ನು ಹಂಚಿಕೊಂಡಿದೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2JjC878

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...