ಮುಂಬಯಿ ಮಹಾಮಳೆ: ನಡುನೀರಲ್ಲಿ ನಿಂತ ಮಹಾಲಕ್ಷ್ಮಿ ಎಕ್ಸ್‌ಪ್ರೆಸ್, ಪ್ರಯಾಣಿಕರ ರಕ್ಷಣೆಗೆ ಕಾರ್ಯಾಚರಣೆ

ಮುಂಬಯಿ: ಮುಂಬಯಿ ಸೇರಿದಂತೆ ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮುಂಬಯಿ ಮಹಾನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಬಯಿ-ಕೊಲ್ಹಾಪುರ ರೈಲು ಮುಂಬಯಿಯಿಂದ 100 ಕಿ.ಮೀ ದೂರದ ವಂಗಾನಿ ಮತ್ತು ಬದ್ಲಾಪುರ್ ಸ್ಟೇಶನ್‌ಗಳ ನಡುವೆ ಬೆಳಗಿನ ಜಾವ 3 ಗಂಟೆಯಿಂದ ಸ್ಥಗಿತಗೊಂಡಿದೆ. ರೈಲಿನೊಳಗಿರುವ ಪ್ರಯಾಣಿಕರೇ ಈ ವಿಷಯ ತಿಳಿಸಿದ್ದು, 700 ಮಂದಿ ಪ್ರಯಾಣಿಕರು ಮಾರ್ಗ ಮಧ್ಯೆ ಸಿಕ್ಕಿಹಾಕಿಕೊಂಡಿದ್ದಾರೆ. ಇದಕ್ಕೆ ಮೊದಲು ಸುಮಾರು 2000 ಮಂದಿ ಪ್ರಯಾಣಿಕರು ಸಿಕ್ಕಿ ಹಾಕಿಕೊಂಡಿದ್ದಾರೆ ಎಂದು ಅಂದಾಜಿಸಲಾಗಿತ್ತು. ರೈಲು ನಿಲುಗಡೆಯಾಗಿರುವ ಸ್ಥಳಕ್ಕೆ ಮೂರು ದೋಣಿಗಳನ್ನು ಕಳುಹಿಸಲಾಗಿದ್ದು, ಪ್ರಯಾಣಿಕರನ್ನು ಸುರಕ್ಷಿತವಾಗಿ ಪಾರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಪ್ರಯಾಣಿಕರನ್ನು ವಿಮಾನದ ಮೂಲಕ ರಕ್ಷಿಸಿ ಕರೆತರುವ ಬಗ್ಗೆ ಚಿಂತನೆ ನಡೆಸಲಾಯಿತು. ಆದರೆ ಭಾರೀ ಸಂಖ್ಯೆಯಲ್ಲಿ ಪ್ರಯಾಣಿಕರು ಸಿಕ್ಕಿಬಿದ್ದಿರುವುದರಿಂದ ಈ ಆಯ್ಕೆಯನ್ನು ಕೈಬಿಡಲಾಯಿತು ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಕಚೇರಿ ಖುದ್ದಾಗಿ ರಕ್ಷಣಾ ಕಾರ್ಯಾಚರಣೆಯನ್ನು ವೀಕ್ಷಿಸುತ್ತಿದೆ. ಪರಿಸ್ಥಿತಿ ಬಗ್ಗೆ ತಿಳಿಯಲು ಎರಡು ವಾಯುಪಡೆ ಹೆಲಿಕಾಪ್ಟರ್‌ಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಎನ್‌ಡಿಆರ್‌ಎಫ್‌, ನೌಕಾಪಡೆ ಮತ್ತು ಕರಾವಳಿ ರಕ್ಷಣಾ ಪಡೆ ತಂಡಗಳು ಪ್ರಯಾಣಿಕರ ನೆರವಿಗಾಗಿ ಸ್ಥಳಕ್ಕೆ ಧಾವಿಸಿವೆ.


from India & World News in Kannada | VK Polls https://ift.tt/2K5WrW1

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...