ಅಧ್ಯಕ್ಷ ಪದವಿಗೆ ರಾಜೀನಾಮೆ ನೀಡಿ ಹೀಗೆ ಸಮಯ ಕಳೆಯುತ್ತಿದ್ದಾರೆ ರಾಹುಲ್; ವೈರಲ್ ಆಯ್ತು ವೀಡಿಯೋ

ಹೊಸದಿಲ್ಲಿ: ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಹುಲ್ ಈಗ ಫುಲ್ ರಿಲ್ಯಾಕ್ಷ್ ಮೂಡಲಿದ್ದಾರೆ. ಅದಕ್ಕೆ ಸಾಕ್ಷಿಯಾಗಿ ಪಿವಿಆರ್‌ನಲ್ಲಿ ಕುಳಿತು ಸಿನಿಮಾ ನೋಡುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವೀಡಿಯೋದಲ್ಲಿ ರಾಹುಲ್ ತಮ್ಮ ಪಕ್ಕದಲ್ಲಿ ಕುಳಿತ ವ್ಯಕ್ತಿಯೊಂದಿಗೆ ಮಾತನಾಡುತ್ತಿದ್ದಾನೆ. ಈ ವೀಡಿಯೋವನ್ನು ಮೌಂಟೇನ್ ಗರ್ಲ್ ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಬಳಕೆದಾರರೊಬ್ಬರು ಹಂಚಿಕೊಂಡಿದ್ದಾರೆ. ವೀಡಿಯೋದಲ್ಲಿ ರಾಹುಲ್ ಪಿವಿಆರ್‌ ಚಾಣಕ್ಯದಲ್ಲಿ ಆರ್ಟಿಕಲ್ 15 ಸಿನಿಮಾ ನೋಡುವುದರಲ್ಲಿ ಮುಳುಗಿರುವುದು ಕಂಡುಬಂದಿದೆ. ಬುಧವಾರ ಸಂಜೆ ಕಂಡು ಬಂದ ದೃಶ್ಯ ಇದು ಎನ್ನಲಾಗುತ್ತಿದೆ. ಗಮನಾರ್ಹ ವಿಷಯವೆಂದರೆ ಯಾವುದೇ ವಿವಿಐಪಿ ಸೌಲಭ್ಯವಿಲ್ಲದೆ, ಸಾಮಾನ್ಯ ವ್ಯಕ್ತಿಯಂತೆ ರಾಹುಲ್ ಪಿವಿರ್‌ನಲ್ಲಿ ಕುಳಿತಿದ್ದರು. ತಮ್ಮ ಪಕ್ಕದಲ್ಲಿ ಕುಳಿತ ವ್ಯಕ್ತಿಯೊಂದಿಗೆ ರಾಹುಲ್ ಮಾತನಾಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಬಳಿಕ ರಾಹುಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಪಕ್ಷದ ವರಿಷ್ಠ ನೇತಾರರು ಎಷ್ಟೇ ಪ್ರಯತ್ನ ಪಟ್ಟರು ರಾಹುಲ್ ಮನವೊಲಿಸಲು ಸಾಧ್ಯವಾಗಲಿಲ್ಲ. ಕಳೆದ ವಾರ ಅವರು ಅಧಿಕೃತವಾಗಿ ಅಧ್ಯಕ್ಷ ಸ್ಥಾನವನ್ನು ತ್ಯಜಿಸಿದ್ದಾರೆ.


from India & World News in Kannada | VK Polls https://ift.tt/2Xrr1D4

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...