ಭಾರತದ ಫೀಲ್ಡಿಂಗ್ ಕೋಚ್ ಆಗಲಿದ್ದಾರೆ ಜಾಂಟಿ ರೋಡ್ಸ್?

ಹೊಸದಿಲ್ಲಿ: ನಿಮ್ಮಗೆಲ್ಲರಿಗೂ ತಿಳಿದಿರುವಂತೆಯೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ನೂತನ ಕೋಚ್ ಹುಡುಕಾಟದಲ್ಲಿದೆ. ಇದೀಗ ಬಂದಿರುವ ತಾಜಾ ಮಾಹಿತಿಯಂತೆ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಟೀಮ್ ಇಂಡಿಯಾದ ಫೀಲ್ಡಿಂಗ್ ಕೋಚ್‌ ಹುದ್ದೆಗಾಗಿ ಅರ್ಜಿ ಸಲ್ಲಿಸಿದ್ದಾರಂತೆ. ಸಾರ್ವಕಾಲಿಕ ಶ್ರೇಷ್ಠ ಫೀಲ್ಡರ್ ಎಂದೆನಿಸಿಕೊಂಡಿರುವ ಜಾಂಟಿ ರೋಡ್ಸ್ ಅವರನ್ನು ಫೀಲ್ಡಿಂಗ್ ಕೌಶಲ್ಯದಲ್ಲಿ ಮೀರಿಸುವವರು ಇನ್ನು ಯಾರೂ ಬಂದಿಲ್ಲ. 1992ರ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಇನ್ಜಾಮಾಮ್ ಉಲ್ ಹಕ್ ಅವರನ್ನು ಔಟ್ ಮಾಡಿರುವ ರೀತಿಯೂ ಈಗಲೂ ಅಚ್ಚಳಿಯದೇ ಉಳಿದಿದೆ. ಅಲ್ಲಿಂದ ಬಳಿಕ ವಿಶ್ವ ಫೀಲ್ಡಿಂಗ್ ಗುಣಮಟ್ಟವನ್ನೇ ಬದಲಾಯಿಸಿದ್ದರು. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕಳೆದ ಕೆಲವು ವರ್ಷಗಳಿಂದ ಮುಂಬೈ ಇಂಡಿಯನ್ಸ್ ತಂಡದ ಫೀಲ್ಡಿಂಗ್ ಕೋಚ್ ಹುದ್ದೆಯನ್ನು ನಿರ್ವಹಿಸುತ್ತಿರುವ ರೋಡ್ಸ್, ಭಾರತೀಯ ಆಟಗಾರರೊಂದಿಗೆ ಉತ್ತಮ ಬಾಂಧವ್ಯವನ್ನು ಕಾಪಾಡಿಕೊಂಡಿದ್ದಾರೆ. ಭಾರತೀಯ ಕ್ರಿಕೆಟಿಗರು ಹೇಗೆ ಕೆಲಸ ನಿರ್ವಹಿಸುತ್ತಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟ ಜ್ಞಾನವಾಗಿದೆ. ಇವೆಲ್ಲದರ ನಡುವೆ ಫೀಲ್ಡಿಂಗ್ ಗುಣಮಟ್ಟವನ್ನು ವೃದ್ಧಿಸುವಲ್ಲಿ ನೆರವಾಗಲಿದ್ದಾರೆ ಎಂಬ ನಿರೀಕ್ಷೆಯಿದೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/32MLvVS

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...