ಭೋಪಾಲ: ಮಕ್ಕಳ ಕಳ್ಳರೆಂದು ಭಾವಿಸಿ ಇಬ್ಬರು ನಾಯಕರನ್ನು ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ನವಾಲ್ ಸಿಂಘನಾ ಎಂಬ ಗ್ರಾಮದಲ್ಲಿ ಗುರುವಾರ ಮಧ್ಯ ರಾತ್ರಿ ಈ ಘಟನೆ ಸಂಭವಿಸಿದೆ. ಬೆತುಲ್ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಶುಕ್ಲಾ ಮತ್ತು ಸ್ಥಳೀಯ ಕಾಂಗ್ರೆಸ್ ಮುಖಂಡ ಧರ್ಮು ಸಿಂಗ್ ಲಂಜಿವಾರ್ ಹಲ್ಲೆಗೊಳಗಾದವರು. ನವಾಲ್ ಸಿಂಘನಾ ಗ್ರಾಮದಲ್ಲಿ ಮಕ್ಕಳ ಕಳ್ಳರ ಗ್ಯಾಂಗ್ ಓಡಾಡುತ್ತಿದೆ ಎಂಬ ವಂದತಿ ಮೇರೆಗೆ ಗ್ರಾಮಸ್ಥರು ಮರಗಳನ್ನು ಹಾಕಿ ರಸ್ತೆ ಬಂದ್ ಮಾಡಿದ್ದರು. ಈ ವೇಳೆ ಮಾರ್ಗದಲ್ಲಿ ಕಾಂಗ್ರೆಸ್ ನಾಯಕರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ರಸ್ತೆಯಲ್ಲಿ ಮರಗಳು ಬಿದ್ದಿರುವುದನ್ನು ನೋಡಿ ಕಾರನ್ನು ಹಿಂದಿರುಗಿಸಿ ಹೊರಡಲು ಪ್ರಯತ್ನಿಸಿದ್ದಾರೆ. ಈ ವೇಳೆ ಇವರನ್ನೆ ಎಂದು ಭಾವಿಸಿದ ಗ್ರಾಮಸ್ಥರು, ಅವರನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಬಳಿಕ ಅವರ ಕಾರ್ ಜಖಂಗೊಳಿಸಿ, ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
from India & World News in Kannada | VK Polls https://ift.tt/2OoY7zv