ಇಡಿ ಕಚೇರಿಯಲ್ಲಿ ದಿನವೀಡಿ ಡಿಕೆ ಶಿವಕುಮಾರ್‌ಗೆ ಡ್ರಿಲ್‌; 10 ಗಂಟೆಗೂ ಹೆಚ್ಚು ಕಾಲ ವಿಚಾರಣೆ

ಹೊಸದಿಲ್ಲಿ: ಅಕ್ರಮ ಆಸ್ತಿ ಪತ್ತೆ ಪ್ರಕರಣ ಸಂಬಂಧ ಹೊಸದಿಲ್ಲಿಯ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಚೇರಿಯಲ್ಲಿ ವಿಚಾರಣೆ ನಡೆಸಿದರು. ಸುಮಾರು 10 ಗಂಟೆಗೂ ಹೆಚ್ಚು ಕಾಲ ಶಿವಕುಮಾರ್‌ ವಿಚಾರಣೆ ಮುಂದುವರಿಸಲಾಗಿದೆ. ಶನಿವಾರ ರಾತ್ರಿಯವರೆಗೂ ವಿಚಾರಣೆ ಮುಂದುವರಿಯುವ ಸಾಧ್ಯತೆ ಇದೆ. ಅಗತ್ಯಬಿದ್ದರೆ ಇನ್ನೂ ಎರಡು ಮೂರು ದಿನ ವಿಚಾರಣೆ ನಡೆಯುವ ನಿರೀಕ್ಷೆ ಇದೆ. ಶುಕ್ರವಾರ ಸಂಜೆ 5 ಗಂಟೆಗೆ ಹೊಸದಿಲ್ಲಿಗೆ ಬಂದ ಡಿಕೆ ಶಿವಕುಮಾರ್‌ ಕಚೇರಿಗೆ ಆಗಮಿಸಿದ್ದರು. ಶುಕ್ರವಾರ ರಾತ್ರಿ ಕೆಲವು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಮತ್ತೆ ಶನಿವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆ ಆರಂಭವಾಯಿತು. ಮಧ್ಯಾಹ್ನ 2 ಗಂಟೆಗೆ ಭೋಜನ ವಿರಾಮ ನೀಡಲಾಯಿತು. ಈ ಸಂದರ್ಭದಲ್ಲಿ ಖಾನ್‌ ಮಾರುಕಟ್ಟೆಯಲ್ಲಿ ಹೋಟೆಲ್‌ಗೆ ಹುಡುಕಾಡಿದ ಡಿಕೆಶಿ ನಂತರ ಕಾರಿನಲ್ಲಿ ಸಹೋದರ ಡಿಕೆ ಸುರೇಶ್‌ ನಿವಾಸಕ್ಕೆ ತೆರಳಿ ಭೋಜನ ಸೇವಿಸಿ ಮತ್ತೆ ವಿಚಾರಣೆಗೆ ಹಾಜರಾದರು. ಜಾರಿ ನಿರ್ದೇಶನಾಲಯದ ಜಂಟಿ ಆಯುಕ್ತರನ್ನು ಒಳಗೊಂಡ ತಂಡ ಡಿಕೆ ಶಿವಕುಮಾರ್‌ ವಿಚಾರಣೆ ನಡೆಸುತ್ತಿದೆ. ಇಡಿ ಸಮನ್ಸ್‌ಗೆ ತಡೆಯಾಜ್ಞೆ ನೀಡಬೇಕೆಂದು ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ರದ್ದುಗೊಂಡಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ರಾತ್ರಿಯೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್‌ ಜಾರಿಗೊಳಿಸಿದರು. ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಡಿಕೆ ಶಿವಕುಮಾರ್‌ ಅವರ ನಿವಾಸ, ಕಚೇರಿಗಳ ಮೇಲೆ ಆಗಸ್ಟ್‌ 1, 2017ರಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಡಿಕೆಶಿಗೆ ಸೇರಿದ್ದ ಒಟ್ಟು 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಹೊಸದಿಲ್ಲಿಯ ಡಿಕೆಶಿ ನಿವಾಸದ ಮೇಲೂ ದಾಳಿ ನಡೆಸಲಾಗಿತ್ತು. ಈ ಸಂದರ್ಭದಲ್ಲಿ 8.9 ಕೋಟಿ ರೂ. ನಗದು ಪತ್ತೆಯಾಗಿತ್ತು.


from India & World News in Kannada | VK Polls https://ift.tt/2MMTuNZ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...