ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ 14 ಅನರ್ಹ ಶಾಸಕರು

ಹೊಸದಿಲ್ಲಿ: ದೋಸ್ತಿ ಸರಕಾರ ಪತನಕ್ಕೆ ಕಾರಣರಾಗಿ ಅನರ್ಹಗೊಂಡಿದ್ದ 14 ಶಾಸಕರು ಮಾಜಿ ಸ್ಪೀಕರ್‌ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮನ್ನು ಅನರ್ಹತೆ ಮಾಡಿರುವ ಮಾಜಿ ಸ್ಪೀಕರ್‌ ಆದೇಶವನ್ನು ರದ್ದುಗೊಳಿಸುವಂತೆ ಕಾಂಗ್ರೆಸ್‌, ಜೆಡಿಎಸ್‌ನ 14 ಶಾಸಕರು ಮೆಟ್ಟಿಲು ಹತ್ತಿದ್ದಾರೆ. ಈ ಮೊದಲು ಅನರ್ಹಗೊಂಡಿದ್ದ ಗೋಕಾಕ್‌ ಶಾಸಕ ರಮೇಶ್‌ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್‌ ಕುಮಟಳ್ಳಿ, ರಾಣೆಬೆನ್ನೂರಿನ ಶಾಸಕ ಆರ್‌. ಶಂಕರ್‌ ಈಗಾಗಲೇ ತಮ್ಮ ಅನರ್ಹತೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈಗ ಇನ್ನುಳಿದ 14 ಶಾಸಕರು ಕಾನೂನು ಹೋರಾಟಕ್ಕೆ ಇಳಿದಿದ್ದಾರೆ. ಜೆಡಿಎಸ್‌ನ ಎಚ್‌ ವಿಶ್ವನಾಥ್‌, ಕೆ ಗೋಪಾಲಯ್ಯ, ನಾರಾಯಣಗೌಡ ಅರ್ಜಿ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಪಕ್ಷದ , ಎಸ್‌ಟಿ ಸೋಮಶೇಖರ್‌, ಭೈರತಿ ಬಸವರಾಜ್‌, ಎಂಟಿಬಿ ನಾಗರಾಜ್‌, ಬಿಸಿ ಪಾಟೀಲ್‌, ಪ್ರತಾಪ್‌ ಗೌಡ ಪಾಟೀಲ್‌, ಡಾ. ಕೆ. ಸುಧಾಕರ್‌, ರೋಷನ್‌ ಬೇಗ್‌, ಆನಂದ್‌ ಸಿಂಗ್‌, ಶಿವರಾಮ್‌ ಹೆಬ್ಬಾರ್‌ ಅವರು ಮಾಜಿ ಸ್ಪೀಕರ್‌ ತೀರ್ಮಾನ ಪ್ರಶ್ನಿಸಿ ಕಾನೂನಿನ ಮೊರೆ ಹೋಗಿದ್ದಾರೆ.


from India & World News in Kannada | VK Polls https://ift.tt/2LVugfM

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...