ಸೆ.1ರಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ಬಿಜೆಪಿ ಸೇರ್ಪಡೆ

ಮುಂಬಯಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕರು ಆಗಿದ್ದ ನಾರಾಯಣ್ ರಾಣೆ ಅವರು ಸೆಪ್ಟೆಂಬರ್ 1ರಂದು ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ತೊರೆದ ಬಳಿಕ ಮಹಾರಾಷ್ಟ್ರ ಸ್ವಾಭಿಮಾನ್ ಪಕ್ಷ ಸ್ಥಾಪಿಸುವ ಮೂಲಕ ಎನ್‌ಡಿಎ ಭಾಗವಾಗಿದ್ದ ರಾಣೆ, ಬಿಜೆಪಿ ಬೆಂಬಲದೊಂದಿದೆ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಈ ಕುರಿತು ಪತ್ರಕರ್ತರ ಜತೆ ಮಾತನಾಡಿರುವ , 'ನಾನು ಸೆಪ್ಟೆಂಬರ್ 1ರಂದು ಮಹಾರಾಷ್ಟ್ರದ ಸೋಲ್ಹಾಪುರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಕದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಯಾಗಲಿದ್ದೇನೆ' ಎಂದು ಸ್ಪಷ್ಟಪಡಿಸಿದ್ದಾರೆ. ಅಷ್ಟೆ ಅಲ್ಲದೆ, ಎನ್‌ಸಿಪಿ ಶಾಸಕ ರಾಣಾ ಜಗಜೀತಸಿಂಹ ಪಾಟೀಲ್ ಮತ್ತು ಸತಾರಾ ಸಂಸದ ಉದಯನರಾಜೆ ಭೋಸಲೆ ಅವರು ಕೂಡ ಬಿಜೆಪಿ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.


from India & World News in Kannada | VK Polls https://ift.tt/30WJvsE

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...