ಟಿ20ನಲ್ಲಿ 7000 ರನ್ ಮೈಲುಗಲ್ಲಿನ ಸನಿಹದಲ್ಲಿ ಧವನ್

ಗಯಾನ: ಏಕದಿನ ವಿಶ್ವಕಪ್ ವೇಳೆ ಗಾಯಗೊಂಡಿದ್ದ ಎಡಗೈ ಬ್ಯಾಟ್ಸ್‌ಮನ್ ವೆಸ್ಟ್‌ಇಂಡೀಸ್ ವಿರುದ್ಧದ ಸರಣಿ ವೇಳೆ ತಂಡವನ್ನು ಸೇರಿಕೊಂಡಿದ್ದರು. ಆದರೆ ಮೊದಲೆರಡು ಟ್ವೆಂಟಿ-20 ಪಂದ್ಯಗಳಲ್ಲಿ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದರು. ಇದೀಗ ಮೂರನೇ ಪಂದ್ಯದಲ್ಲಿ ಮಗದೊಂದು ಸ್ಮರಣೀಯ ದಾಖಲೆಯನ್ನು ಎದುರು ನೋಡುತ್ತಿದ್ದಾರೆ. ಟ್ವೆಂಟಿ-20 ಕ್ರಿಕೆಟ್‌ನಲ್ಲಿ 7000 ರನ್ ಮೈಲುಗಲ್ಲು ತಲುಪಲು ಧವನ್‌ಗೆ ಇನ್ನು 47 ರನ್‌ಗಳ ಅವಶ್ಯಕತೆಯಿದೆ. ಈ ಮೂಲಕ ಈ ದಾಖಲೆ ಬರೆದ ಭಾರತದ ನಾಲ್ಕನೇ ಬ್ಯಾಟ್ಸ್‌ಮನ್ ಎಂದೆನಿಸಿಕೊಳ್ಳಲಿದ್ದಾರೆ. ನಾಯಕ ವಿರಾಟ್ ಕೊಹ್ಲಿ, ಸುರೇಶ್ ರೈನಾ ಹಾಗೂ ರೋಹಿತ್ ಶರ್ಮಾ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರರಾಗಿದ್ದಾರೆ. ವಿರಾಟ್ ಕೊಹ್ಲಿ ಅತಿ ಹೆಚ್ಚು 8416 ರನ್ ಗಳಿಸಿದ್ದಾರೆ. ತದಾ ಬಳಿಕದ ಸ್ಥಾನಗಳಲ್ಲಿರುವ ರೈನಾ ಹಾಗೂ ರೋಹಿತ್ ಅನುಕ್ರಮವಾಗಿ 8392 ಹಾಗೂ 8292 ರನ್ ಪೇರಿಸಿದ್ದಾರೆ. ಇನ್ನು ನಾಲ್ಕನೇ ಸ್ಥಾನದಲ್ಲಿರುವ ಧವನ್ 6953 ರನ್ ಗಳಿಸಿದ್ದಾರೆ. ಟಾಪ್ 5 ಪಟ್ಟಿಯಲ್ಲಿರುವ ಮಹೇಂದ್ರ ಸಿಂಗ್ ಧೋನಿ 6621 ರನ್ ಗಳಿಸಿದ್ದಾರೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2YKHNJd

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...