ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಮಹತ್ತರ ದಾಖಲೆ ಬರೆದ ಕೊಹ್ಲಿ

ಫ್ಲೋರಿಡಾ: ಭಾರತ ಕ್ರಿಕೆಟ್ ತಂಡದ ನಾಯಕ ಟ್ವೆಂಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಹತ್ತರ ಮೈಲುಗಲ್ಲು ತಲುಪಿದ್ದಾರೆ. ವಿರುದ್ಧ ನಡೆದ ಮೊದಲ ಟ್ವೆಂಟಿ-20 ಪಂದ್ಯದಲ್ಲಿ ಬೌಂಡರಿ ಬಾರಿಸುವ ಮೂಲಕ ವಿರಾಟ್, ಟ್ವೆಂಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸಿದ ಬ್ಯಾಟ್ಸ್‌ಮನ್ ಎಂದೆನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಶ್ರೀಲಂಕಾದ ಮಾಜಿ ಬ್ಯಾಟ್ಸ್‌ಮನ್ ತಿಲಕರತ್ನೆ ದಿಲ್ಶಾನ್ ದಾಖಲೆಯನ್ನು ಮುರಿದಿದ್ದಾರೆ. ಕೊಹ್ಲಿ ಇದೀಗ ಒಟ್ಟು 224 ಬೌಂಡರಿಗಳನ್ನು ಬಾರಿಸಿದ್ದಾರೆ. ಅಂದ ಹಾಗೆ ವೆಸ್ಟ್‌ಇಂಡೀಸ್ ವಿರುದ್ಧ ನಾಲ್ಕು ವಿಕೆಟ್ ಅಂತರದ ಗೆಲುವು ದಾಖಲಿಸಿರುವ ಮೂರು ಪಂದ್ಯಗಳ ಟ್ವೆಂಟಿ-20 ಸರಣಿಯಲ್ಲಿ 1-0 ಅಂತರದ ಮುನ್ನಡೆ ದಾಖಲಿಸಿದೆ. ಏತನ್ಮಧ್ಯೆ ಟ್ವೆಂಟಿ-20 ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಜತೆ ಜಂಟಿ ಅಗ್ರಸ್ಥಾನವನ್ನು ಹಂಚಿಕೊಂಡಿರುವ ವಿರಾಟ್ ಕೊಹ್ಲಿ 20 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಇವರಿಬ್ಬರಲ್ಲಿ ಯಾರು ದಾಖಲೆ ಮುರಿಯಲಿದ್ದಾರೆ ಎಂಬುದು ಕುತೂಹಲವೆನಿಸಿದೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2YGNo35

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...