22 ಎಸೆತಗಳಲ್ಲಿ 51 ರನ್ ಚಚ್ಚಿದ ಯುವಿ; ಕಮ್‌ಬ್ಯಾಕ್ ಪ್ಲೀಸ್!

ಟೊರಂಟೊ: ಟೀಮ್ ಇಂಡಿಯಾದಲ್ಲಿ ಅವಕಾಶ ನಿರಾಕರಿಸ್ಪಟ್ಟಿದ್ದರಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಆದರೆ ನಿವೃತ್ತಿ ಬಳಿಕವೂ ಆಯ್ದ ಜಾಗತಿಕ ಟ್ವೆಂಟಿ-20 ಟೂರ್ನಿಗಳಲ್ಲಿ ಮುಂದುವರಿದಿರುವ ಯುವರಾಜ್ ಭರ್ಜರಿ ಪ್ರದರ್ಶನ ನೀಡಿರುವ ಎಲ್ಲರ ಗಮನ ಸೆಳೆದಿದ್ದಾರೆ. ಇದರೊಂದಿಗೆ ಅಭಿಮಾನಿಗಳು ಮತ್ತೆ ಕಮ್‌ಬ್ಯಾಕ್ ಯುವಿ ಎಂದು ಕೂಗತೊಡಗಿದ್ದಾರೆ. ಟೂರ್ನಮೆಂಟ್‌ನಲ್ಲಿ ಯುವಿ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಚಚ್ಚುವ ಮೂಲಕ ತಮ್ಮ ಸಾಮರ್ಥ್ಯವನ್ನು ಮೆರೆದಿದ್ದಾರೆ. ಟೊರಂಟೊ ನ್ಯಾಷನಲ್ಸ್ ತಂಡವನ್ನು ಮುನ್ನಡೆಸುತ್ತಿರುವ ಯುವಿ ಫೀಲ್ಡಿಂಗ್‌ನಲ್ಲೂ ಮಿಂಚಿದ್ದು, ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಮಿಂಚಿದ್ದಾರೆ. ಯುವರಾಜ್ ಸಿಂಗ್ ಬಿರುಸಿನ ಆಟದ ಹೊರತಾಗಿಯೂ ಬ್ರಾಂಪ್ಟನ್ ವೋಲ್ಸ್ ವಿರುದ್ಧ ಸೋಲಿಗೆ ಶರಣಾಗಿದೆ. ಈ ಮೂಲಕ ಐದನೇ ಸ್ಥಾನಕ್ಕೆ ಕುಸಿದಿದೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2YH0nBX

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...