* ರದ್ದುಪಡಿಸಿರುವುದಾಗಿ ರಾಷ್ಟ್ರಪತಿಗಳು ಹೊರಡಿಸಿದ ಆದೇಶವನ್ನು ಸಂಸತ್ತಿನ ಅನುಮೋದನೆಗಾಗಿ ಲೋಕಸಭೆಯಲ್ಲಿ ಮಂಡಿಸಿದ ಗೃಹಸಚಿವ . * ಕಾಂಗ್ರೆಸ್ ಪರವಾಗಿ ಶಶಿ ತರೂರ್ ಮತ್ತು ಮನೀಶ್ ತಿವಾರಿ ಮಾತನಾಡಲಿದ್ದಾರೆ. ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದ ಪುನಾರಚನೆ ಹಾಗೂ 370ನೇ ವಿಧಿ ರದ್ದುಪಡಿಸುವ ಐತಿಹಾಸಿಕ ಪ್ರಸ್ತಾವನೆಯನ್ನು ರಾಜ್ಯಸಭೆ ಅಂಗೀಕರಿಸಿದ ಬಳಿಕ ಇಂದು ಲೋಕಸಭೆಯಲ್ಲಿ ಮಂಡಿಸಲಾಗುತ್ತಿದೆ. ಲೋಕಸಭೆಯಲ್ಲಿ ಬಿಜೆಪಿ ಏಕಾಂಗಿಯಾಗಿಯೇ ಭರ್ಜರಿ ಬಹುಮತ ಹೊಂದಿರುವುದರಿಂದ ವಿಧೇಯಕಕ್ಕೆ ಅಂಗೀಕಾರ ದೊರಕಿಸುವುದು ಸುಲಭವಾಗಿದೆ. ಜಮ್ಮು ಮತ್ತು ಕಾಶ್ಮೀರ ಮುಂದೊಂದು ದಿನ ಮತ್ತೆ ರಾಜ್ಯದ ಸ್ಥಾನಮಾನ ಪಡೆಯುವ ಸಾಧ್ಯತೆಯಿದೆ ಎಂಬ ಗೃಹಸಚಿವ ಅಮಿತ್ ಶಾ ಹೇಳಿಕೆಯನ್ನು ಸ್ಥಳೀಯ ಜನತೆ ಸ್ವಾಗತಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಮತ್ತು ಸಹಜ ಸ್ಥಿತಿ ನೆಲೆಸಿದೆ. ಯಾವುದೇ ಪ್ರತಿಭಟನೆಗಳು ನಡೆದಿಲ್ಲ ಎಂದು ಸರಕಾರಿ ಮೂಲಗಳು ತಿಳಿಸಿವೆ. ಜಮ್ಮು-ಕಾಶ್ಮೀರ ಪುನಾರಚನೆ ವಿಧೇಯಕವನ್ನು ಇಂದು ಲೋಕಸಭೆಯಲ್ಲಿ ಮಂಡಿಸಲಿರುವ ಹಿನ್ನೆಲೆಯಲ್ಲಿ ಇದಕ್ಕೆ ತಡೆಯೊಡ್ಡಲು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ನಿಲುವಳಿ ಸೂಚನೆ ನೀಡಿದ್ದಾರೆ.
from India & World News in Kannada | VK Polls https://ift.tt/2MG3GqL