ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ವಿಧಿ ರದ್ದುಗೊಳಿಸಿ ಭಾರತದೊಂದಿಗೆ ಅದನ್ನು ಸಂಪೂರ್ಣವಾಗಿ ವಿಲೀನ ಮಾಡಲು ಹೊರಟಿರುವ ಪ್ರಧಾನಿ ನೇತೃತ್ವದ ಕೇಂದ್ರ ಸರ್ಕಾರದ ನಿರ್ಣಯವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಸ್ವಾಗತಿಸಿದೆ. 'ಜಮ್ಮು ಮತ್ತು ಕಾಶ್ಮೀರ ಹಾಗೂ ಒಟ್ಟಾರೆ ದೇಶದ ಹಿತಕ್ಕಾಗಿ ಇದು ಅತ್ಯಂತ ಅಗತ್ಯವಾಗಿತ್ತು. ಸ್ವಾರ್ಥದ ಉದ್ದೇಶಗಳು ಮತ್ತು ರಾಜಕೀಯ ಮತಭೇದಗಳನ್ನು ಬಿಟ್ಟು ಪ್ರತಿಯೊಬ್ಬರೂ ಈ ಕ್ರಮಕ್ಕೆ ಬೆಂಬಲ ಸೂಚಿಸಬೇಕು' ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಹೇಳಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರಕಾರದ ಪ್ರಸ್ತಾಪಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅಂಕಿತ ಹಾಕಿದ್ದಾರೆ. ಇಂದು (ಸೋಮವಾರ) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ 370 ಮತ್ತು 35ಎ ವಿಧಿ ರದ್ದುಗೊಳಿಸುವುದಾಗಿ ಘೋಷಿಸಿದ್ದರು. ಇದ್ದಕೂ ಮೊದಲು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿತ್ತು.
from India & World News in Kannada | VK Polls https://ift.tt/2YHpUer