ಆರ್ಟಿಕಲ್‌ 370, 35ಎ ರದ್ದು: ರಾಜ್ಯದೆಲ್ಲೆಡೆ ಸಂಭ್ರಮಾಚರಣೆ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ವಿಧಿ ರದ್ದುಗೊಳಿಸಿ ಭಾರತದೊಂದಿಗೆ ಅದನ್ನು ಸಂಪೂರ್ಣವಾಗಿ ವಿಲೀನ ಮಾಡಲು ಹೊರಟಿರುವ ಪ್ರಧಾನಿ ನೇತೃತ್ವದ ಕೇಂದ್ರ ಸರ್ಕಾರದ ನಿರ್ಣಯವನ್ನು ಸ್ವಾಗತಿಸಿ ರಾಜ್ಯದಲ್ಲಿ ಸಂಭ್ರಮಾಚರಣೆ ಆಚರಿಸಲಾಗುತ್ತಿದೆ. ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ್ದನ್ನು ಸ್ವಾಗತಿಸಿರು ಬಾಗಲಕೋಟೆ ಜನರು, ನಗರದ ಕಿಲ್ಲಾ ಪ್ರದೇಶದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಜಮ್ಮು ಕಾಶ್ಮೀರ ವಿಭಜನೆ ಹಾಗೂ ಆರ್ಟಿಕಲ್ 370 ಮತ್ತು 35(ಎ) ರದ್ದುಪಡಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಮೈಸೂರು ವಕೀಲರು ಸಂಭ್ರಮದಿಂದ ಸ್ವಾಗತಿಸಿದರು. ಅಧ್ಯಕ್ಷರಾದ ಆನಂದಕುಮಾರ್, ಕಾರ್ಯದರ್ಶಿ ಬಿ. ಶಿವಣ್ಣ, ಪಡುವಾರಹಳ್ಳಿ, ಎಂ ರಾಮಕೃಷ್ಣ, ಜವರೆಗೌಡ, ಅಪ್ಪಾಜಿ, ಪ್ರಣೀತ್, ಶರತ್, ಜಗದೀಶ್ ಉಪಸ್ಥಿತರಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಜಮ್ಮು-ಕಾಶ್ಮೀರದ 370ನೇ ವಿಧಿಯನ್ನು ರದ್ದುಗೊಳಿಸಿರು ಕ್ರಮವನ್ನು ಸ್ವಾಗತಿಸಿರುವ ಮಂಡ್ಯದ ಬಿಜೆಪಿ ಕಾರ್ಯಕರ್ತರು, ನಗರದಲ್ಲಿ ಸಂಭ್ರಮಾಚರಣೆ ನಡೆಸಿದರು. ಜಮ್ಮು ಕಾಶ್ಮೀರದ ಆರ್ಟಿಕಲ್ 370 ಹಾಗೂ 35(A) ರದ್ದುಗೊಳಿಸಿದ ಹಿನ್ನೆಲೆ ಬಳ್ಳಾರಿಯಲ್ಲಿ ವಕೀಲರ ಸಂಘಟನೆಯಿಂದ ವಿಜಯೋತ್ಸವ. ನಗರದ ರಾಯಲ್ ವೃತ್ತದಲ್ಲಿ ಪಟಾಕಿ ಹಚ್ಚಿ ಸಂಭ್ರಮಾಚರಣೆ. ಸಿಹಿ ಹಂಚಿದ ಹಂಚಿದ ವಕೀಲರು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ನಿರ್ಧಾರಕ್ಕೆ ಸ್ವಾಗತ ಕೋರಿ ಹರ್ಷ ವ್ಯಕ್ತಪಡಿಸಿದ ನ್ಯಾಯವಾದಿಗಳು.


from India & World News in Kannada | VK Polls https://ift.tt/2GOiGio

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...