(ಫ್ರಾನ್ಸ್): ಭಾರತ ಮತ್ತು ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಸ್ಪಷ್ಟಪಡಿಸಿದ್ದಾರೆ. ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಮಾತುಕತೆ ನಡೆಸಿದ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಜಮ್ಮು ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವುದಾಗಿ ಘೋಷಣೆ ಮಾಡಿದ್ದ ಡೊನಾಲ್ಡ್ ಟ್ರಂಪ್ ಈಗ ಯೂಟರ್ನ್ ಹೊಡೆದಿದ್ದಾರೆ. ಭಾರತ ಮತ್ತು ಪಾಕಿಸ್ತಾನದ್ದು ದ್ವಿಪಕ್ಷೀಯ ಸಮಸ್ಯೆ. ಜಮ್ಮು ಕಾಶ್ಮೀರ ವಿಷಯದಲ್ಲಿಯೂ ಮಧ್ಯ ಪ್ರವೇಶಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜಮ್ಮು ಕಾಶ್ಮೀರ ಎಂದಿಗೂ ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ವಿಷಯ ಎಂದು ಟ್ರಂಪ್ ತಿಳಿಸಿದರು. ಭಾರತ ಮತ್ತು ಪಾಕಿಸ್ತಾನ 1947ರವರೆಗೂ ಒಂದಾಗಿತ್ತು. ಈಗ ವಿಭಜನೆಯಾಗಿದೆ. ನಮ್ಮ ಸಮಸ್ಯೆಗಳನ್ನು ನಾವು ಬಗೆಹರಿಸಿಕೊಳ್ಳಲು ಪ್ರಯತ್ನಿಸುತ್ತೇವೆ ಎಂದು ನರೇಂದ್ರ ಮೋದಿ ಖಡಕ್ಕಾಗಿ ಹೇಳಿದ್ದಾರೆ. ಇದಕ್ಕೆ ದನಿಗೂಡಿಸಿದ ಡೊನಾಲ್ಡ್ ಟ್ರಂಪ್, ಕಾಶ್ಮೀರ ಸಮಸ್ಯೆ ಆ ದೇಶಗಳದ್ದು. ಅವುಗಳೇ ಬಗೆಹರಿಸಿಕೊಳ್ಳುತ್ತದೆ. ಮೂರನೇ ರಾಷ್ಟ್ರದ ಅಗತ್ಯವಿಲ್ಲ ಎಂದರು.
from India & World News in Kannada | VK Polls https://ift.tt/30zWnoE