ದ್ವಿತೀಯ ಕದನ; ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ಲೌಡರ್‌ಹಿಲ್: ಫ್ಲೋರಿಡಾದಲ್ಲಿ ವೆಸ್ಟ್‌ಇಂಡೀಸ್ ವಿರುದ್ಧ ನಡೆಯುತ್ತಿರುವ ದ್ವಿತೀಯ ಟ್ವೆಂಟಿ-20 ಪಂದ್ಯದಲ್ಲೂ ಗೆಲುವು ದಾಖಲಿಸಿ ಮೂರು ಪಂದ್ಯಗಳ ಟ್ವೆಂಟಿ-20 ಸರಣಿ ವಶಪಡಿಸಿಕೊಳ್ಳುವ ಇರಾದೆಯನ್ನು ಹೊಂದಿದೆ. ಭಾರತ ಬ್ಯಾಟಿಂಗ್... ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಬದಲಾವಣೆಯಿಲ್ಲ. ವಿಜೇತ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ತರಲಾಗಿಲ್ಲ. ಇನ್ನೊಂದೆಡೆ ವೆಸ್ಟ್‌ಇಂಡೀಸ್ ತಂಡದಲ್ಲಿ ಒಂದು ಬದಲಾವಣೆ ತರಲಾಗಿದ್ದು, ಜಾನ್ ಕ್ಯಾಂಪ್‌ಬೆಲ್‌ರನ್ನು ಕೈಬಿಡಲಾಗಿದೆ. ಇದರಿಂದಾಗಿ ಸುನಿಲ್ ನರೈನ್ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಖಾರಿ ಪಿಯರಿ ತಂಡವನ್ನು ಸೇರಿಕೊಂಡಿದ್ದಾರೆ. ಆಡುವ ಬಳಗ ಇಂತಿದೆ: West Indies (Playing XI): Evin Lewis, Sunil Narine, Nicholas Pooran(w), Kieron Pollard, Shimron Hetmyer, Rovman Powell, Carlos Brathwaite(c), Keemo Paul, Khary Pierre, Sheldon Cottrell, Oshane Thomas India (Playing XI): , Shikhar Dhawan, Virat Kohli(c), Rishabh Pant(w), Manish Pandey, Krunal Pandya, Ravindra Jadeja, Washington Sundar, Bhuvneshwar Kumar, Navdeep Saini, K Khaleel Ahmed ಶನಿವಾರ ನಡೆದ ಮೊದಲ ಲೋ ಸ್ಕೋರಿಂಗ್ ಟ್ವೆಂಟಿ-20 ಪಂದ್ಯದಲ್ಲಿ ಟೀಮ್ ಇಂಡಿಯಾ ನಾಲ್ಕು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿತ್ತು. ಡೆಬ್ಯು ಬೌಲರ್ ನವದೀಪ್ ಸೈನಿ ಮೂರು ವಿಕೆಟ್ ನೆರವಿನಿಂದ ವಿಂಡೀಸ್ ತಂಡವನ್ನು 95 ರನ್‌ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾಗಿತ್ತು. ಬಳಿಕ ಅಲ್ಪ ಆತಂಕ ಎದುರಸಿದ್ದರೂ ಇನ್ನು 16 ಎಸೆತಗಳು ಬಾಕಿ ಉಳಿದಿರುವಂತೆಯೇ ನಾಲ್ಕು ವಿಕೆಟ್ ನಷ್ಟಕ್ಕೆ ಗುರಿ ತಲುಪಿತ್ತು.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2yAN5wd

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...