ಗೆದ್ದ ಬಳಿಕ ರಾಷ್ಟ್ರಗೀತೆ ವೇಳೆ ಭಾವುಕರಾದ ಭಾರತದ ಹೆಮ್ಮೆಯ ಪಿವಿ ಸಿಂಧೂ

ಬಾಸೆಲ್ (ಸ್ವಿಜರ್ಲೆಂಡ್): ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಮೊತ್ತ ಮೊದಲ ಭಾರತೀಯ ಆಟಗಾರ್ತಿ ಎಂಬ ಹಿರಿಮೆಗೆ ಪಾತ್ರವಾಗಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ 21-7, 21-7ರ ಅಂತರದಲ್ಲಿ ಗೆದ್ದು ಇತಿಹಾಸ ರಚಿಸಿದರು. ಒಟ್ಟಾರೆಯಾಗಿ ದಾಖಲೆಯ ಐದನೇ ಬಾರಿಗೆ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಸಾಧನೆ ಮಾಡಿದ್ದಾರೆ. 24ರ ಹರೆಯದ ಹೈದರಾಬಾದ್‌ ಆಟಗಾರ್ತಿ 2017 ಮತ್ತು 2018ರ ಆವೃತ್ತಿಗಳಲ್ಲಿ ಫೈನಲ್‌ ಪ್ರವೇಶಿಸಿ ಬೆಳ್ಳಿ ಪದಕ ಮತ್ತು 2013 ಹಾಗೂ 2014ನೇ ಆವೃತ್ತಿಯಲ್ಲೂ ಕಂಚಿನ ಪದಕ ಬಾಚಿಕೊಂಡಿದ್ದರು. ಈ ಪೈಕಿ 2017ರಲ್ಲಿ ಒಕುಹರಾ ವಿರುದ್ಧವೇ ಪ್ರಶಸ್ತಿ ಸುತ್ತಿನಲ್ಲಿ ಸೋಲನ್ನು ಅನುಭವಿಸಿದ್ದರು. ಇದೀಗ ಮತ್ತದೇ ಒಕುಹರಾ ಮಣಿಸಿ ಪ್ರಶಸ್ತಿಗೆ ಮುತ್ತಿಕ್ಕುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ. ಈ ನಡುವೆ ಪ್ರಶಸ್ತಿ ಗೆದ್ದ ಬಳಿಕ ರಾಷ್ಟ್ರಗೀತೆ ವೇಳೆ ಸಿಂಧೂ ಭಾವುಕರಾದರು. ಈ ಕ್ಷಣವಂತೂ ಭಾರತೀಯ ಕ್ರೀಡಾಭಿಮಾನಿಗಳಲ್ಲಿ ರೋಮಾಂಚನವನ್ನುಂಟು ಮಾಡಿತ್ತು.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2Zv0G7e

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...