ಕಾಶ್ಮೀರ ವಿಷಯ ಇತ್ಯರ್ಥ ಪಡಿಸದಿದ್ದರೆ ಪರಮಾಣು ಯುದ್ಧ: ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಬೆದರಿಕೆ

ವಾಷಿಂಗ್ಟನ್‌: ವಿಷಯದಲ್ಲಿ ಜಾಗತಿಕ ಸಮುದಾಯದಿಂದ ತೀವ್ರ ಮುಖಭಂಗಕ್ಕೆ ಒಳಗಾಗಿರುವ ಪಾಕಿಸ್ತಾನ ಈಗ ಯುದ್ಧೋನ್ಮಾದಲ್ಲಿದೆ. ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ಜಾಗತಿಕ ಸಮುದಾಯ ಸ್ಪಷ್ಟ ನಿಲುವು ಪ್ರಕಟಿಸದಿದ್ದರೆ ಮಾಡಲಾಗುವುದು ಎಂದು ಪಾಕಿಸ್ತಾನದ ಪ್ರಧಾನಮಂತ್ರಿ ಬೆದರಿಕೆ ಹಾಕಿದ್ದಾರೆ. ನ್ಯೂಯಾರ್ಕ್‌ ಟೈಮ್ಸ್‌ನಲ್ಲಿ ಈ ಕುರಿತು ವರದಿ ಪ್ರಕಟಿಸಲಾಗಿದೆ. ಜಮ್ಮು ಕಾಶ್ಮೀರದ ಮೇಳೆ ಭಾರತ ನಡೆಸುತ್ತಿರುವ ದಬ್ಬಾಳಿಕೆ ಹಾಗೂ ಅಲ್ಲಿನ ಜನರ ಮೇಲೆ ನಡೆಸುತ್ತಿರುವ ದೌರ್ಜನ್ಯ ತಡೆಯಲು ಜಾಗತಿಕ ಸಮುದಾಯ ಮುಂದಾಗದಿದ್ದರೆ ಪರಮಾಣು ಯುದ್ಧ ಹೂಡಲಾಗುವುದು. ಭಾರತ-ಪಾಕಿಸ್ತಾನ ನಡುವೆ ಯುದ್ಧ ನಡೆಯುವ ಸಾಧ್ಯತೆಯೂ ಇದೆ ಎಂದು ಇಮ್ರಾನ್‌ ಖಾನ್‌ ಬರೆದಿದ್ದಾರೆ. ಭಾರತದ ರಕ್ಷಣಾ ಸಚಿವರು ಈ ಬಗ್ಗೆ ಈಗಾಗಲೇ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಮೊದಲಿಗೆ ನಾವು ಅಣ್ವಸ್ತ್ರ ಬಳಸುವುದಿಲ್ಲ. ಆದರೆ ಎಲ್ಲವೂ ಪರಿಸ್ಥಿತಿ ಮೇಲೆ ಅವಲಂಬಿತವಾಗಿರುತ್ತದೆ ಎಂದು ಭಾರತದ ರಕ್ಷಣಾ ಸಚಿವರ ಹೇಳಿಕೆಯನ್ನು ಇಮ್ರಾನ್‌ ಖಾನ್‌ ಉಲ್ಲೇಖಿಸಿದ್ದಾರೆ.


from India & World News in Kannada | VK Polls https://ift.tt/2HzBN02

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...