ಹೊಸದಿಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಯುಎಇಯ '' ಪುರಸ್ಕಾರ ನೀಡಿ ಗೌರವಿಸಲಾಗಿದೆ. ದ್ವಿಪಕ್ಷೀಯ ಸಹಕಾರ ಸಂಬಂಧ ವೃದ್ಧಿಸಲು ಹಾಗೂ ಅಸಾಧಾರಣ ಕ್ರಮಗಳನ್ನು ಕೈಗೊಂಡಿರುವ ಮೋದಿಯವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಶನಿವಾರ ಪ್ರದಾನ ಮಾಡಿ ಸನ್ಮಾನಿಸಲಾಯಿತು. ಯುಎಇ ಸಂಸ್ಥಾಫಕ ಶೇಖ್ ಜಯೀದ್ ಬಿನ್ ಸುಲ್ತಾನ್ ಅಲ್ ನೆಹ್ಯಾನ್ ಹೆಸರಿನಲ್ಲಿ ಈ ಪ್ರಶಸ್ತಿ ವಿತರಣೆ ಮಾಡಲಾಗಿದೆ. ಜಯೀದ್ ಅವರ ಜನ್ಮ ಶತಮಾನೋತ್ಸವ ಹಿನ್ನೆಲೆಯಲ್ಲಿ ಭಾರತದ ಪ್ರಧಾನಿ ಮೋದಿಗೆ ಈ ಅತ್ಯುನ್ನತ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಯುಎಇ ತಿಳಿಸಿದೆ. ಈ ಹಿಂದೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್, ರಾಣಿ ಎಲಿಜಬೆತ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರಿಗೆ ನೀಡಿ ಗೌರವಿಸಲಾಗಿತ್ತು. 2015ರಲ್ಲಿ ಯುಎಇಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಉಭಯ ದೇಶಗಳ ದ್ವಿಪಕ್ಷೀಯ ಸಹಕಾರ ಸಂಬಂಧ ವೃದ್ಧಿಸಲು ಹಲವಾರು ಕ್ರಮಗಳನ್ನು ಮೋದಿ ಪ್ರಕಟಿಸಿದ್ದರು.
from India & World News in Kannada | VK Polls https://ift.tt/321VDZQ