ಬಿಯಾರಿಟ್ಸ್: ಜಿ-7 ರಾಷ್ಟ್ರಗಳ ಗುಂಪಿನಲ್ಲಿ ಸದಸ್ಯತ್ವ ಹೊಂದಿರದಿದ್ದರೂ ಪ್ರಧಾನಿ ಅವರಿಗೆ ಜಿ7 ಶೃಂಗಸಭೆಯಲ್ಲಿ ಭಾಗವಹಿಸಲು ವಿಶೇಷ ಆಹ್ವಾನ ಸಿಕ್ಕಿದ್ದು, ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಕಾಶ್ಮೀರದ ವಿಚಾರವನ್ನು ಮನವರಿಕೆ ಮಾಡಿಕೊಡುವ ಸಾಧ್ಯತೆ ಇದೆ. ಭಾರತ ಮತ್ತು ಪಾಕಿಸ್ತಾನ ರಾಷ್ಟ್ರಗಳ ನಡುವಣ ಭಿಕ್ಕಟ್ಟು ಬಗೆಹರಿಸುವ ಮತ್ತು ಕಾಶ್ಮೀರದಲ್ಲಿ ಮಾನವ ಹಕ್ಕುಗಳು ಉಲ್ಲಂಘನೆಯಾಗದಂತೆ ಕಾಪಾಡುವ ದೃಷ್ಟಿಯಿಂದ ಅಮೆರಿಕ ಅಧ್ಯಕ್ಷ ಫ್ರಾನ್ಸ್‌ನಲ್ಲಿ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಅಮೆರಿಕದ ಆಡಳಿತ ಕಚೇರಿಯ ಅಧಿಕೃತ ಮೂಲಗಳು ತಿಳಿಸಿವೆ. ಈ ಹಿಂದೆ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಆರ್ಟಿಕಲ್ 370 ರದ್ದುಗೊಳಿಸದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಏರ್ಪಟ್ಟಿರುವ ಭಿಕ್ಕಟ್ಟಿನ ವಿಚಾರವಾಗಿ ಮಧ್ಯಸ್ಥಿಕೆ ವಹಿಸುವುದಾಗಿ ಡೊನಾಲ್ಡ್ ಟ್ರಂಪ್ ಹೇಳಿದ್ದರು. ಕಾಶ್ಮೀರ ಬಹಳ ಕ್ಲಿಸ್ಟಕರ ಪ್ರದೇಶ. ಭಾರತದಲ್ಲಿ ಮುಸ್ಲಿಮರಿದ್ದಾರೆ. ಪಾಕಿಸ್ತಾನದಲ್ಲಿ ಹಿಂದುಗಳಿದ್ದಾರೆ. ನಾನು ಮಧ್ಯಸ್ಥಿಕೆ ವಹಿಸುವ ಮೂಲಕ ಅತ್ಯುತ್ತಮವಾಗಿ ನಿಭಾಯಿಸುತ್ತೇನೆ ಎಂದು ಕಳೆದ ವಾರ ಟ್ರಂಪ್ ಹೇಳಿದ್ದರು.
from India & World News in Kannada | VK Polls https://ift.tt/2U5srOK