ಸ್ಯಾಂಡ್ ಪೇಪರ್ ಇದೆಯಾ? ವಾರ್ನರ್ ರಿಯಾಕ್ಷನ್ ಹೇಗಿತ್ತು ನೋಡಿ!

ಬರ್ಮಿಂಗ್‌ಹ್ಯಾಮ್: ಆತಿಥೇಯ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಆ್ಯಶಸ್ ಸರಣಿಯ ಮೊದಲ ಟೆಸ್ಟ್ ಪಂದ್ಯದುದ್ಧಕ್ಕೂ ಪ್ರಕರಣದಲ್ಲಿ ಸಿಕ್ಕಿ ಬಿದ್ದ ಆಟಗಾರರಿಗೆ ವ್ಯಾಪಕ ವಿರೋಧಗಳು ವ್ಯಕ್ತವಾಗುತ್ತಿದೆ. ಇಂಗ್ಲಿಷ್ ಅಭಿಮಾನಿಗಳು ಗೇಲಿಯನ್ನು ಮುಂದುವರಿಸಿದ್ದಾರೆ. ಇದನ್ನು ಸಹಿಸಿಕೊಳ್ಳಲಾರದ ವಾರ್ನರ್ ಅನ್ಯ ದಾರಿಯಿಲ್ಲದೆ ತಮ್ಮ ಪ್ಯಾಂಟ್‌ನ ಜೇಬನ್ನು ಬಿಚ್ಚಿ ತೋರಿಸಿರುವ ಪ್ರಕರಣ ನಡೆದಿದೆ. ಮೂರನೇ ದಿನದಾಟದಲ್ಲಿ ಆಸ್ಟ್ರೇಲಿಯಾ ಫೀಲ್ಡಿಂಗ್ ವೇಳೆ ಘಟನೆ ನಡೆದಿತ್ತು. ಬೌಂಡರಿ ಗೆರೆ ಬಳಿ ಫೀಲ್ಡಿಂಗ್ ನಡೆಯುತ್ತಿದ್ದಾಗ ಪ್ರೇಕ್ಷಕರು ವಾರ್ನರ್ ಜೇಬಲ್ಲಿ ಸ್ಯಾಂಡ್ ಪೇಪರ್ ಇದೆ ಎಂದು ಕೂಗಾಡಿದ್ದರು. ಪದೇ ಪದೇ ಆವರ್ತಿಸಿದಾಗ ವಾರ್ನರ್ ನಗುಮುಖದಿಂದಲೇ ಜೇಬನ್ನು ಬಿಚ್ಚಿ ತೋರಿಸಿದರು. 2018ರ ಮಾರ್ಚ್ ತಿಂಗಳಲ್ಲಿ ದಕ್ಷಿಣ ಆಫ್ರಿಕಾದ ಕೇಪ್ ಟೌನ್ ಟೆಸ್ಟ್ ಪಂದ್ಯದಲ್ಲಿ ವಾರ್ನರ್ ಸೇರಿದಂತೆ ಸ್ಟೀವ್ ಸ್ಮಿತ್ ಹಾಗೂ ಕ್ಯಾಮರೂನ್ ಬ್ಯಾಂಕ್ರಾಫ್ಟ್ ಸ್ಯಾಂಡ್ ಪೇಪರ್ ಬಳಸಿಕೊಂಡು ಚೆಂಡನ್ನು ವಿರೂಪಗೊಳಿಸಿದ್ದರು. ಬಳಿಕ ಕ್ರಿಕೆಟ್ ಆಸ್ಟ್ರೇಲಿಯಾದಿಂದ ಒಂದು ವರ್ಷದ ನಿಷೇಧಕ್ಕೊಳಗಾಗಿದ್ದರು. ಇದೀಗ ಆ್ಯಶಸ್ ಸರಣಿಗೆ ಕಮ್ ಬ್ಯಾಕ್ ಮಾಡಿದರೂ ಅಭಿಮಾನಿಗಳು ಮಾತ್ರ ಹಳೆಯ ಪ್ರಕರಣವನ್ನು ನೆನಪಿಸಿದ್ದಾರೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/33aShF5

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...