ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್‌ ಗಡ್ಕರಿ

ಸೋಲಾಪುರ: ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ಕಾರ್ಯಕ್ರಮದ ವೇದಿಕೆಯಲ್ಲೇ ಕುಸಿದು ಬಿದ್ದಿದ್ದಾರೆ. ಸೋಲಾಪುರದಲ್ಲಿ ನಡೆದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ನಡೆದಿದೆ. ಪ್ರವಾಸ ಕೈಗೊಂಡಿದ್ದ ನಿತಿನ್‌ ಗಡ್ಕರಿ, ಅಹಿಲ್ಯಾದೇವಿ ಹೋಲ್ರ್‌ ವಿವಿಯಲ್ಲಿ ನಡೆದ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ರಾಷ್ಟ್ರಗೀತೆ ಹಾಡುತ್ತಿದ್ದ ಸಂದರ್ಭದಲ್ಲಿ ಸಚಿವ ನಿತಿನ್‌ ಗಡ್ಕರಿ ತಲೆ ಸುತ್ತು ಬಂದು ಕುರ್ಚಿ ಮೇಲೆ ಕುಸಿದಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ವೈದ್ಯರ ತಂಡ ಪರಿಶೀಲನೆ ನಡೆಸಿದರು. ಆಯಾಸದಿಂದ ಹೀಗಾಗಿದೆ ಎಂದು ಮಾಹಿತಿ ನೀಡಿದರು. ಸೋಲಾಪುರ ಪ್ರವಾಸ ಕೈಗೊಂಡಿದ್ದ ನಿತಿನ್‌ ಗಡ್ಕರಿ ಈ ಕಾರ್ಯಕ್ರಮದ ನಂತರ ಇನ್ನೂ ಎರಡು ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿತ್ತು. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.


from India & World News in Kannada | VK Polls https://ift.tt/2My0BsC

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...