ಹೊಸ ಲುಕ್‌ನಲ್ಲಿ ಕಾಣಿಸಿಕೊಂಡ ಮಹೇಂದ್ರ ಸಿಂಗ್ ಧೋನಿ

ಜೈಪುರ: ಸದಾ ತಮ್ಮ ವಿಶೇಷ ವೇಷಭೂಷಣದಿಂದಲೇ ಗಮನ ಸೆಳೆಯುತ್ತಿರುವ ಮಾಜಿ ನಾಯಕ ಮಗದೊಮ್ಮೆ ವಿಶಿಷ್ಟ ಶೈಲಿಯಲ್ಲಿ ಕಾಣಿಸಿಕೊಂಡಿದ್ದಾರೆ. ಏಕದಿನ ವಿಶ್ವಕಪ್ ಬಳಿಕ ಭಾರತ ಕ್ರಿಕೆಟ್ ತಂಡದಿಂದ ಎರಡು ವರ್ಷಗಳ ವಿಶ್ರಾಂತಿಯನ್ನು ಪಡೆದಿರುವ ಲೆಫ್ಟಿನಂಟ್ ಕರ್ನಲ್ ಮಹೇಂದ್ರ ಸಿಂಗ್ ಧೋನಿ, ಕಾಶ್ಮೀರದಲ್ಲಿ ಭಾರತೀಯ ಸೇನೆಯೊಂದಿಗೆ 15 ದಿನಗಳ ಕಾಲ ಕರ್ತ್ಯವ್ಯವನ್ನು ಸಲ್ಲಿಸಿದ್ದರು. ಈ ನಡುವೆ ಸ್ವಾತಂತ್ರ್ಯ ದಿನಾಚರಣೆಯಂದು ಲಡಾನ್‌ನಲ್ಲಿ ಧ್ವಜಾರೋಹಣ ಮಾಡುವ ಮೂಲಕ ಗಮನ ಸೆಳೆದಿದ್ದರು. ಬಳಿಕ ಹಿಂತಿರುಗಿರುವ 38ರ ಹರೆಯದ ಧೋನಿ ಇದೀಗ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಜಾಹೀರಾತು ಶೂಟಿಂಗ್‌ನಲ್ಲಿ ಭಾಗವಹಿಸಿರುವ ಧೋನಿ ಇದೀಗ ಈ ರೂಪದಲ್ಲಿ ಏಕೆ ಕಾಣಿಸಿಕೊಂಡಿದ್ದಾರೆ ಎಂಬುದು ಕುತೂಹಲಕ್ಕೆಡೆ ಮಾಡಿದೆ. ಏತನ್ಮಧ್ಯೆ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಯಾವಾಗ ಮರಳಲಿದ್ದಾರೆ ಎಂಬುದು ಹೆಚ್ಚಿನ ಆಸಕ್ತಿ ಕೆರಳಿಸಿದೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2Zh8xpJ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...