ಮೂರು ತುಂಡುಗಳಾಗಲಿದೆ ಜಮ್ಮು ಮತ್ತು ಕಾಶ್ಮೀರ: ಅಮಿತ್‌ ಶಾ ಪ್ರಸ್ತಾಪ

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರವನ್ನು ಮೂರು ವಿಭಾಗಗಳಾಗಿ ವಿಂಗಿಡಿಸಲು ಕೇಂದ್ರ ಸರಕಾರ ಪ್ರಸ್ತಾವವಿಟ್ಟಿದೆ. ಸಂವಿಧಾನದ ವಿಧಿ 370ನ್ನು ರದ್ದುಗೊಳಿಸಿದ ಬಳಿಕ, ರಾಜ್ಯಸಭೆಯಲ್ಲಿ , ಜಮ್ಮು ಕಾಶ್ಮೀರ ರಾಜ್ಯವನ್ನು ಮೂರು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಾಗಿಸುವ ಪ್ರಸ್ತಾಪ ಮಂಡಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರವಾಗಿ ಮೂರು ಭಾಗಗಳಾಗಿ ವಿಂಗಡಿ, ಪುದುಚೇರಿ, ಲಕ್ಷದ್ವೀಪದ ಮಾದರಿಯಲ್ಲಿ ವಿಧಾನಸಭೆ ಒಳಗೊಂಡ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾರ್ಪಾಡು ಮಾಡಲು ಕೇಂದ್ರ ತೀರ್ಮಾನಿಸಿದೆ. ಲಡಾಖ್‌ ಅತ್ಯಂತ ದೊಡ್ಡ ಭೂ ಪ್ರದೇಶವಾಗಿದ್ದು, ಈ ಭಾಗದಲ್ಲಿನ ಜನರ ಬಹು ವರ್ಷಗಳ ಬೇಡಿಕೆ ಇದಾಗಿತ್ತು ಎಂದು ಅಮಿತ್‌ ಶಾ ಹೇಳಿದರು. ಚಂಡೀಗಡದಂತೆಯೇ ಲಡಾಖ್‌ ವಿಧಾನಸಭೆ ಇಲ್ಲದ ಕೇಂದ್ರಾಡಳಿತ ಪ್ರದೇಶವಾಗಲಿದೆ. ಅಂತೆಯೇ ಜಮ್ಮು ಹಾಗೂ ಕಾಶ್ಮೀರದಲ್ಲಿ ದಿಲ್ಲಿಯಂತೆ ವಿಧಾನಸಭೆಯುಳ್ಳ ಕೇಂದ್ರಾಡಳಿತ ಪ್ರದೇಶವಾಗಿ ಕಾರ್ಯನಿರ್ವಹಿಸಲಿದೆ. ಆದರೆ ರಾಜ್ಯ ಪೊಲೀಸ್‌ ಇಲಾಖೆ ಕೇಂದ್ರ ಗೃಹ ಸಚಿವಾಲಯದ ಕೆಳಗೆ ಕೆಲಸ ಮಾಡಲಿದೆ. ರಾಜ್ಯ ಸರಕಾರದ ಕೆಳಗಡೆ ಇರುವುದಿಲ್ಲ ಎಂದು ಅಮಿತ್‌ ಶಾ ಹೇಳಿಕೆ ನೀಡಿದರು. ಲಡಾಖ್‌ ಭೌಗೋಳಿಕವಾಗಿ ಭಿನ್ನವಾಗಿದೆ. ಆಂತರಿಕ ಭದ್ರತೆ, ಜಮ್ಮು ಹಾಗೂ ಕಾಶ್ಮೀರ ಎದುರಿಸುತ್ತಿರುವ ಗಡಿಯಾಚೆಗಿನ ಭಯೋತ್ಪಾದನಾ ಸಮಸ್ಯೆಗಳನ್ನು ಗಮದಲ್ಲಿರಿಸಿ, ರಾಜ್ಯವನ್ನು ವಿಧಾನಸಭೆಯುಳ್ಳ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕೆಂದು ಅಮಿತ್‌ ಶಾ ತಮ್ಮ ಪ್ರಸ್ತಾವನೆಯಲ್ಲಿ ಹೇಳಿದ್ದಾರೆ. ಕೇಂದ್ರ ಸರಕಾರದ ಈ ಪ್ರಸ್ತಾವನೆಗೆ ಪ್ರತಿಪಕ್ಷಗಳು ವ್ಯಾಪಕವಾಗಿ ವಿರೋಧ ವ್ಯಕ್ತಪಡಿಸಿದರೆ, ಬಿಜೆಪಿ ಬೆಂಬಲಿಗರು ಸ್ವಾಗತಿಸಿದ್ದಾರೆ. ಕಾಂಗ್ರೆಸ್‌ ನಾಯಕರು ಇದು ಕರಾಳ ದಿನಕ್ಕೆ ಸಮ. ಜಮ್ಮು ಕಾಶ್ಮೀರಕ್ಕೆ ನೀಡಿರುವ ಸಾಂವಿಧಾನಿಕ ವಿಶೇಷ ಸ್ಥಾನಮಾನವನ್ನು ಹಿಂಪಡೆಯುವ ನಿರ್ಧಾರ ಖಂಡನೀಯ ಎಂದು ಹೇಳಿದ್ದಾರೆ.


from India & World News in Kannada | VK Polls https://ift.tt/2Zyol3o

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...